ಮಣಿಪುರದಲ್ಲಿ ಮತ್ತೆ ಹಿಂಸಾಚಾರ, ಪೊಲೀಸರೊಂದಿಗೆ ಪ್ರತಿಭಟನಾಕಾರರ ಘರ್ಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಆರಂಭವಾಗಿದೆ. ಮಣಿಪುರದ ರಾಜಧಾನಿ ಇಂಫಾಲ್‌ನಲ್ಲಿ ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆಗಿಳಿದಿದ್ದು, ಗುಂಪು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮತ್ತು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದರು. ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ.

ಸೆಪ್ಟೆಂಬರ್ 16 ರಂದು, ಕೆಲವರು ಶಸ್ತ್ರಾಸ್ತ್ರಗಳೊಂದಿಗೆ ಸಿಕ್ಕಿಬಿದ್ದ ನಂತರ ಪೊಲೀಸರು ಐದು ಜನರನ್ನು ಬಂಧಿಸಿದರು. ಅಂದಿನಿಂದ ಆರೋಪಿಗಳ ಬೆಂಬಲಕ್ಕೆ ನಿಂತವರಿಂದ ಪ್ರತಿಭಟನೆಗಳು ನಡೆಯುತ್ತಿವೆ. ಹಲವು ಪ್ರದೇಶಗಳಲ್ಲಿ ಪ್ರತಿಭಟನಾಕಾರರು ರ್ಯಾಲಿ ನಡೆಸುತ್ತಾ ಬಂಧಿತ ಐವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಇಂಫಾಲ್‌ನ ಅವಳಿ ಜಿಲ್ಲೆಗಳಲ್ಲಿ ಸಂಜೆ 5 ಗಂಟೆಯಿಂದ ಕರ್ಫ್ಯೂ ಸಡಿಲಿಕೆಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ.

ಚಳವಳಿಗಾರರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರಿದ್ದಾರೆ. ಕಳೆದ ಕೆಲ ತಿಂಗಳಿಂದ ಮಣಿಪುರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಈ ವರ್ಷ ಮೇ ತಿಂಗಳಿನಿಂದ ಇಲ್ಲಿಯವರೆಗೆ 150 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!