ಮಣಿಪುರದಲ್ಲಿ ಹಿಂಸಾಚಾರ: ಹೆಚ್ಚುವರಿ 10,000ಕ್ಕೂ ಹೆಚ್ಚು ಸೈನಿಕರ ನಿಯೋಜನೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಣಿಪುರದಲ್ಲಿ ಹೆಚ್ಚುತ್ತಿರುವ ಹಿಂಸಾಚಾರದ ಮಧ್ಯೆ ಮಣಿಪುರ ರಾಜ್ಯದಲ್ಲಿ ಶಾಂತಿಯನ್ನು ಪುನಃಸ್ಥಾಪಿಸಲು, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ (ಸಿಎಪಿಎಫ್) ಸುಮಾರು 90 ತುಕಡಿ (10,000 ಹೆಚ್ಚುವರಿ ಪಡೆ) ನೆರವನ್ನು ರಾಜ್ಯವು ಪಡೆಯಲಿದೆ ಎಂದು ರಾಜ್ಯ ಸರ್ಕಾರದ ಭದ್ರತಾ ಸಲಹೆಗಾರ ಕುಲದೀಪ್ ಸಿಂಗ್ ಶುಕ್ರವಾರ ತಿಳಿಸಿದ್ದಾರೆ.

ಇಂಫಾಲ್‌ನಲ್ಲಿ ಭದ್ರತಾ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಂಗ್, ಸೇನೆ, ಪೊಲೀಸ್, ಸಿಆರ್ ಪಿಎಫ್, ಬಿಎಸ್ ಎಫ್ ಮತ್ತು ಐಟಿಬಿಪಿ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಪರಿಸ್ಥಿತಿ ಕುರಿತು ಪರಾಮರ್ಶೆ ನಡೆಸಲಾಯಿತು ಎಂದರು.

ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಎಸ್ ಪಿ ಗಳೊಂದಿಗೆ ಚರ್ಚೆ ನಡೆಸಿದ್ದೇವೆ. ಈಗಾಗಲೇ ಮಣಿಪುರದಲ್ಲಿರುವ 198 ಸೇನಾ ತುಕಡಿ ಅಲ್ಲದೇ, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ (ಸಿಎಪಿಎಫ್) ಸುಮಾರು 90 ತುಕಡಿ (10,000 ಹೆಚ್ಚುವರಿ ಪಡೆ) ನೆರವನ್ನು ರಾಜ್ಯವು ಪಡೆಯಲಿದೆ ಎಂದು ತಿಳಿಸಿದರು.

ಮೇ 2023 ರಿಂದ ಇಲ್ಲಿವರೆಗೂ ಉಗ್ರರು ಸೇರಿದಂತೆ ಒಟ್ಟು 258 ಮಂದಿ ಸಾವನ್ನಪ್ಪಿದ್ದಾರೆ. ಸಚಿವರು ಮತ್ತು ಶಾಸಕರ ಆಸ್ತಿ ಧ್ವಂಸ ಮತ್ತು ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ 32 ಜನರನ್ನು ಬಂಧಿಸಲಾಗಿದ್ದು, ಸುಮಾರು 3,000 ಲೂಟಿ ಮಾಡಿದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!