ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರದ ಹಿಂಸಾಚಾರ ಪೀಡಿತ ಕಾಂಗ್ ಪೋಕ್ ಪಿ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜನೆ ಮಾಡಲಾಗಿದೆ.
ಕುಕಿ ಸಮುದಾಯದ ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಸಂಘರ್ಷದಲ್ಲಿ ಓರ್ವ ಪ್ರತಿಭಟನಾಕಾರ ಮೃತಪಟ್ಟಿದ್ದು, ಪೊಲೀಸರು ಹಾಗೂ ಮಹಿಳೆಯರು ಸೇರಿದಂತೆ 40ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.
ಮಣಿಪುರದಲ್ಲಿ ಜನರ ಸಂಚಾರಕ್ಕೆ ನಿರ್ಬಂಧಗಳು ಇರಬಾರದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೀಡಿರುವ ಸೂಚನೆಯನ್ನು ಕುಕಿ ಸಮುದಾಯದ ಕೆಲವರು ವಿರೋಧಿಸಿದ್ದರು. ಹೀಗಾಗಿ ಪ್ರತಿಭಟನೆ ನಡೆಸುತ್ತಿದ್ದಾಗ ಘರ್ಷಣೆ ಉಂಟಾಗಿದೆ.