January18, 2026
Sunday, January 18, 2026
spot_img

ನೇಪಾಳದಲ್ಲಿ ಹಿಂಸಾಚಾರ: ಕನ್ನಡಿಗರ ರಕ್ಷಣೆಗೆ ಬದ್ಧ ಎಂದ ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನೇಪಾಳದಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಘಟನೆ ಬೆನ್ನಲ್ಲೇ ಸಂಕಷ್ಟಕ್ಕೆ ಸಿಲುಕಿರುವ ಪ್ರತಿಯೊಬ್ಬ ಕನ್ನಡಿಗನ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನೇಪಾಳ ಪರಿಸ್ಥಿತಿ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ನೇಪಾಳದಲ್ಲಿ ವಿದ್ಯಾರ್ಥಿ-ಯುವಜನರ ಕ್ಷಿಪ್ರ ಬೃಹತ್ ಪ್ರತಿಭಟನೆ ಕಾರಣಕ್ಕೆ ದೇಶಾದ್ಯಂತ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ. ಪರಿಣಾಮವಾಗಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಮುಖ್ಯ ಕಾರ್ಯದರ್ಶಿಗಳು ಈ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಅಗತ್ಯ ಕ್ರಮ ಕೈಗೊಂಡಿದ್ದು, ನೇಪಾಳದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಪ್ರತಿಯೊಬ್ಬ ಕನ್ನಡಿಗನನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

Must Read

error: Content is protected !!