ಹೊಸದಿಗಂತ ಆನ್ ಲೈನ್ ಡೆಸ್ಕ್:
ಪಶ್ಚಿಮ ಬಂಗಾಳದ ಸಿಟಾಲ್ಕುಚಿ ವಿಧಾನಸಭಾ ಕ್ಷೇತ್ರದ ಮತಗಟ್ಟೆ ನಂ.126 ರಲ್ಲಿ ಹಿಂಸಾಚಾರ ವರದಿಯಾದ ಹಿನ್ನೆಲೆಯಲ್ಲಿ ಮತದಾನ ಪ್ರಕ್ರಿಯೆಯನ್ನು ಮುಂದೂಡಲು ಚುನಾವಣಾ ಆಯೋಗ ಆದೇಶ ನೀಡಿದೆ.
ವಿಶೇಷ ವೀಕ್ಷಕರ ಪ್ರಾಥಮಿಕ ವರದಿಯ ಆಧಾರದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ. ಅಧಿಕಾರಿಗಳಿಂದ ಘಟನೆ ಬಗ್ಗೆ ವಿಸ್ತೃತ ವರದಿಯನ್ನು ಕೇಳಲಾಗಿದ್ದು, ಸಂಜೆ 5 ಕ್ಕೆ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ವರದಿಯನ್ನು ನೀಡಲಿದ್ದಾರೆ.
ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯ ಸಿಟಲ್ಕುಚಿ ಮತಗಟ್ಟೆ ಬಳಿ ನಡೆದ ಗುಂಡಿನ ದಾಳಿಯಲ್ಲಿ ಯುವ ಮತದಾರ ಹತ್ಯೆಗೀಡಾದ ನಂತರ ಎದ್ದ ಗಲಭೆಯನ್ನು ನಿಯಂತ್ರಿಸಲು ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್) ನಡೆಸಿದ ಗುಂಡಿನ ದಾಳಿಗೆ ನಾಲ್ವರು ಬಲಿಯಾಗಿದ್ದರು. ಈ ಬೆನ್ನಲ್ಲೇ ಆಯೋಗ ಮತದಾನವನ್ನು ಮುಂದೂಡುವ ನಿರ್ಧಾರ ಪ್ರಕಟಿಸಿದೆ.