ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ: ಅ.12ರವರೆಗೆ ನಿಷೇದಾಜ್ಞೆ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಎಕ್ಬಾಲ್ಪೋರ್ ಪ್ರದೇಶದಲ್ಲಿ ಇಂದಿನಿಂದ ಅಕ್ಟೋಬರ್ 12 ರವರೆಗೆ ಮೂರು ದಿನಗಳ ಸೆಕ್ಷನ್ 144 ಅನ್ನು ವಿಧಿಸಲಾಗಿದೆ.

ಭಾನುವಾರ ರಾತ್ರಿ ಎರಡು ಸಮುದಾಯಗಳ ನಡುವಿನ ಹಿಂಸಾತ್ಮಕ ಘರ್ಷಣೆಯ ನಂತರ ಕಠಿಣ ಕ್ರಮಕೈಗೊಳ್ಳಲಾಗಿದ್ದು, ಐದು ಅಥವಾ ಅದಕ್ಕಿಂತ ಹೆಚ್ಚು ಜನರ ದೊಡ್ಡ ಸಭೆಗಳನ್ನು ನಿಷೇಧಿಸಲಾಗಿದೆ.

ಆದೇಶದ ಪ್ರಕಾರ, ಯಾವುದೇ ಮಾರಣಾಂತಿಕ ಅಥವಾ ಅಪಾಯಕಾರಿ ಆಯುಧಗಳೊಂದಿಗೆ ಐದು ಅಥವಾ ಅದಕ್ಕಿಂತ ಹೆಚ್ಚು ಜನರನ್ನು ಒಟ್ಟುಗೂಡಿಸಿದರೆ ತಕ್ಷಣದ ಬಂಧಿಸಲು ಸೂಚಿಸಲಾಗಿದೆ. ಶಾಂತಿ ಕದಡುವ ಮತ್ತು ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟು ಮಾಡುವವರ ವಿರುದ್ಧ ಕ್ರಮಕ್ಕೆ ಸೂಚಿಸಿದೆ.

ಭಾನುವಾರ ಕೋಲ್ಕತ್ತಾದ ಮೊಮಿನ್‌ಪುರ ಪ್ರದೇಶದಲ್ಲಿ ಎರಡು ಸಮುದಾಯಗಳ ನಡುವಿನ ಹಿಂಸಾತ್ಮಕ ಘರ್ಷಣೆ ನಡೆದಿತ್ತು. ಈ ವೇಳೆ ಹಲವು ವಾಹನಗಳನ್ನು ಧ್ವಂಸಗೊಳಿಸಲಾಗಿತ್ತು. ಜನರು ಕಲ್ಲು ತೂರಾಟ ನಡೆಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!