ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, June 25, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ: ವರದಿ ನೀಡುವಂತೆ ರಾಜ್ಯಪಾಲರಿಗೆ ಕೇಂದ್ರ ಗೃಹ ಸಚಿವಾಲಯ ಸೂಚನೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಪಶ್ಚಿಮ ಬಂಗಾಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯ ಕುರಿತು ವರದಿ ನೀಡುವಂತೆ ಕೇಂದ್ರ ಗೃಹ ಸಚಿವಾಲಯವು ರಾಜ್ಯಪಾಲ ಜಗದೀಪ್‌ ಧನಖಡ್‌ ಅವರಿಗೆ ಹೇಳಿದೆ. ಚುನಾವಣೆ ಫಲಿತಾಂಶ ಪ್ರಕಟಗೊಂಡ ನಂತರದಲ್ಲಿ ಬಂಗಾಳದಲ್ಲಿ ನಡೆದ ಹಿಂಸಾಚಾರಗಳಿಗೆ ಸಂಬಂಧಿಸಿದಂತೆ ವರದಿ ಕೇಳಿರುವುದಾಗಿ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಈ ಹಿಂದೆ ಕೇಂದ್ರ ಗೃಹ ಸಚಿವಾಲಯವು ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರವನ್ನು ಕೇಳಿತ್ತು. ಆದರೆ, ಇನ್ನೂ ವರದಿ ತಲುಪಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ಶೀಘ್ರವಾಗಿ ಪರಿಸ್ಥಿತಿಯನ್ನು ಅವಲೋಕಿಸಿ ತಮ್ಮ ವರದಿಯನ್ನು ಸಚಿವಾಲಯಕ್ಕೆ ಸಲ್ಲಿಸುವಂತೆ ರಾಜ್ಯಪಾಲರಿಗೆ ತಿಳಿಸಲಾಗಿದೆ. ಚುನಾವಣೆ ಫಲಿತಾಂಶ ನಂತರದ ಹಿಂಸಾಚಾರದ ಬಗ್ಗೆ ತನಿಖೆ ಕೈಗೊಳ್ಳಲು ಹೆಚ್ಚು ಕಾರ್ಯದರ್ಶಿ ದರ್ಜೆಯ ಅಧಿಕಾರಿ ನೇತೃತ್ವದಲ್ಲಿ ನಾಲ್ಕು ಸದಸ್ಯರ ತಂಡವನ್ನು ಕೇಂದ್ರ ಗೃಹ ಸಚಿವಾಲಯವು ರಚಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss