Monday, September 25, 2023

Latest Posts

ಹರಿಯಾಣದಲ್ಲಿ ಹಬ್ಬಿದ ಹಿಂಸಾಚಾರ: ಗುಂಡಿನ ದಾಳಿಗೆ ಹೋಮ್‌ ಗಾರ್ಡ್‌ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹರಿಯಾಣದಲ್ಲಿ ನಡೆಯುತ್ತಿರುವ ಹಿಂಸಾಚಾರ ಮತ್ತಷ್ಟು ವ್ಯಾಪಿಸಿದ್ದು, ಇದೀಗ ಗುರುಗ್ರಾಮ್‌ ಬಳಿ ಇರುವ ನುಹ್‌ ಪಟ್ಟಣದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಗಲಭೆಯಲ್ಲಿ ಇಬ್ಬರು ಹೋಮ್‌ ಗಾರ್ಡ್‌ ಸಿಬ್ಬಂದಿ ಮೇಲೆ ಗುಂಡು ಹಾರಿಸಿ ಹತ್ಯೆಗೈಯಲಾಗಿದೆ.

ಮೆರವಣಿಗೆ ವೇಳೆ ಶುರುವಾದ ಹಿಂಸಾಚಾರದಲ್ಲಿ ಕಲ್ಲು ತೂರಾಟ ನಡೆಸಲಾಗಿದೆ. ಕಾರು ಹಾಗೂ ಬೈಕ್‌ಗಳಿಗೆ ಬೆಂಕಿ ಹಚ್ಚಲಾಗಿದೆ. ಇದೀಗ ನುಹ್‌ ಹಿಂಸಾಚಾರವು ಗುರುಗ್ರಾಮ, ಪರೀದಾಬಾದ್‌ ಪಲ್ವಾಲ್‌ಗಳಿಗೆ ಹರಡಿಕೊಂಡಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪೊಲೀಸರುಜನರನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಿದ್ದಾರೆ. ನುಹ್‌ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ. ಇಡೀ ಜಿಲ್ಲೆಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಬುಧವಾರದವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಹರಿಯಾಣ ಸರ್ಕಾರ ತಿಳಿಸಿದೆ.

ಪರಿಸ್ಥಿತಿಯನ್ನು ಹತೋಟಿಗೆ ತರುವುದು ನಮ್ಮ ಮೊದಲ ಆದ್ಯತೆಯಾಗಿದೆ. ಶಾಂತಿ ಕಾಪಾಡುವಂತೆ ನಾವು ಎಲ್ಲರಿಗೂ ಮನವಿ ಮಾಡುತ್ತಿದ್ದೇವೆ’ ಎಂದು ಗೃಹ ಸಚಿವರು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!