ಹೊಸದಿಗಂತ ಆನ್ಲೈನ್ ಡೆಸ್ಕ್:
ಲಖಿಂಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮುಂದಿನ ಕ್ರಮ ಕೈಗೊಳ್ಳಲು ಸಂಯುಕ್ತ ಕಿಸಾನ್ ಮೋರ್ಚಾ ಇಂದು ಸಭೆ ಕರೆದಿದೆ.
ಲಖಿಂಪುರ-ಖೇರಿ ಜಿಲ್ಲೆಯಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಮೃತಪಟ್ಟಿದ್ದಾರೆ. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಅಜಯ್ ಮಿಶ್ರಾ ಅವರನ್ನು ವಜಾಗೊಳಿಸಬೇಕು ಮತ್ತು ಘಟನೆಯಲ್ಲಿ ಮೃತಪಟ್ಟ ರೈತರ ಶ್ರದ್ಧಾಂಜಲಿಗೂ ಮುನ್ನ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ದೊಡ್ಡ ಹೋರಾಟ ಆರಂಭಿಸಲಾಗುವುದು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹೇಳಿದೆ. ಆಶಿಶ್ ಮಿಶ್ರಾ ಹಾಗೂ ಆತನ ಸಹಚರರ ಬಂಧನಕ್ಕೆ ಕಾಯುತ್ತಿರುವುದಾಗಿಯೂ ಹೇಳಿದೆ.