ಹೊಸದಿಗಂತ ಡಿಜಿಟಲ್ ಡೆಸ್ಕ್:
ವಕ್ಫ್ ಕಾಯ್ದೆ ವಿರುದ್ಧ ಬಂಗಾಳದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಘರ್ಷಣೆ ಇಂದು ಕೂಡ ಮುಂದುವರಿದಿದೆ. ಈವರೆಗೆ 150ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರದ ಪ್ರಾರ್ಥನೆಯ ನಂತರ ಭುಗಿಲೆದ್ದ ಹಿಂಸಾಚಾರದಿಂದಾಗಿ ಮುರ್ಷಿದಾಬಾದ್ ಜಿಲ್ಲೆಯ ಹಲವು ಭಾಗಗಳಿಗೆ ವ್ಯಾಪಿಸಿದ್ದು, ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗಿವೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶಾಂತಿಗಾಗಿ ಮನವಿ ಮಾಡಿದ್ದಾರೆ ಮತ್ತು ಕೆಲವು ರಾಜಕೀಯ ಪಕ್ಷಗಳು ರಾಜಕೀಯ ಲಾಭಕ್ಕಾಗಿ ಧರ್ಮವನ್ನು ದುರುಪಯೋಗಪಡಿಸಿಕೊಳ್ಳಲು ಪ್ರಯತ್ನಿಸುತ್ತಿವೆ ಎಂದು ಕಿಡಿಕಾರಿದ್ದಾರೆ.