ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಮಾಜಿಕ ಮಾಧ್ಯಮ ನಿಷೇಧ ಖಂಡಿಸಿ ಹಿಂಸಾತ್ಮಕ ಪ್ರತಿಭಟನೆಗಳ ನಡುವೆ, ನೇಪಾಳದ ವಿವಿಧ ಜೈಲುಗಳಿಂದ ಕೈದಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ.
18 ಜಿಲ್ಲೆಗಳಲ್ಲಿ 6,000 ಕ್ಕೂ ಹೆಚ್ಚು ಕೈದಿಗಳು ಜೈಲುಗಳಿಂದ ಪರಾರಿಯಾಗಿದ್ದಾರೆ. ಅನೇಕ ಸ್ಥಳಗಳಲ್ಲಿ ಕೈದಿಗಳು ಜೈಲಿನ ಬಾಗಿಲುಗಳನ್ನು ಮುರಿದಿದ್ದಾರೆ. ಈ ಘಟನೆಯು ದೇಶದಲ್ಲಿ ಈಗಾಗಲೇ ತಲೆದೋರಿರುವ ಅವ್ಯವಸ್ಥೆಯನ್ನು ಮತ್ತಷ್ಟು ಹೆಚ್ಚಿಸಿದೆ. ಇದರಿಂದಾಗಿ ಅಧಿಕಾರಿಗಳು ನಿಯಂತ್ರಣ ಪಡೆಯಲು ಹೆಣಗಾಡುತ್ತಿದ್ದಾರೆ.