September 28, 2026
Monday, September 28, 2026
spot_img

ವೈರಲ್ ಬೆಡಗಿ ಮೊನಾಲಿಸಾಳ ಪತಿಗೆ ಮತ್ತಷ್ಟು ಸಂಕಷ್ಟ: ಬಂಧನ ಭೀತಿ ನಡುವೆ ಹರ್ಮನ್ ಕೇರಳ ಹೈಕೋರ್ಟ್ಗೆ ಮೊರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕುಂಭಮೇಳದ ವೇಳೆ ವೈರಲ್ ಆಗಿ ದೇಶಾದ್ಯಂತ ಸುದ್ದಿಯಾಗಿದ್ದ ಮೊನಾಲಿಸಾಳ ಪತಿ ಹರ್ಮನ್ ಗೆ ಮಧ್ಯಪ್ರದೇಶದ ಮಂಡಲೇಶ್ವರ ಜಿಲ್ಲಾ ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದ್ದು, ಪ್ರಕರಣದ ತನಿಖೆಗೆ ಆರೋಪಿ ಸಹಕರಿಸುತ್ತಿಲ್ಲ ಎಂದು ಅಭಿಪ್ರಾಯಪಟ್ಟಿದೆ.


ನ್ಯಾಯಾಲಯದ ಆದೇಶದಲ್ಲಿ, ತನಿಖಾಧಿಕಾರಿಗಳಿಗೆ ಹರ್ಮನ್ ಸಮರ್ಪಕವಾಗಿ ಸಹಕರಿಸಿಲ್ಲ ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಈ ಹಂತದಲ್ಲಿ ನಿರೀಕ್ಷಣಾ ಜಾಮೀನು ನೀಡಿದರೆ ತನಿಖೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ನ್ಯಾಯಾಲಯ ಹೇಳಿದೆ. ಪ್ರಾಸಿಕ್ಯೂಷನ್ ಪರ ವಕೀಲರು, ಆರೋಪಿಯು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಅಥವಾ ಪ್ರಕರಣದ ಸಾಕ್ಷ್ಯಗಳನ್ನು ನಾಶಪಡಿಸುವ ಸಾಧ್ಯತೆ ಇದೆ ಎಂದು ವಾದ ಮಂಡಿಸಿದ್ದು, ಈ ಅಂಶವನ್ನೂ ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದೆ.

ಇದನ್ನೂ ಓದಿ:


ಜಾಮೀನು ಅರ್ಜಿ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ಪೊಲೀಸರು ಹರ್ಮನ್ ಬಂಧನಕ್ಕೆ ಮುಂದಾಗುವ ಸಾಧ್ಯತೆ ಹೆಚ್ಚಾಗಿದ್ದು, ಇದರ ನಡುವೆಯೇ, ಬಂಧನದಿಂದ ರಕ್ಷಣೆ ಕೋರಿ ಹರ್ಮನ್ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ತಮ್ಮ ವಿರುದ್ಧದ ಬಂಧನ ತಡೆಯುವ ಮಧ್ಯಂತರ ಆದೇಶವನ್ನು ವಿಸ್ತರಿಸುವಂತೆ ಅವರು ಮನವಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯಲಿದೆ.

Must Read