ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚಾಗ್ತಿದೆ ವೈರಲ್‌ ಫೀವರ್‌ : ವೈದ್ಯರ ಸೂಚನೆ ತಪ್ಪದೇ ಪಾಲಿಸಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಚಂಡಮಾರುತ ಪ್ರಭಾವದ ಮಳೆ ಹಾಗೂ ಬದಲಾದ ಸನ್ನಿವೇಶದಲ್ಲಿ ಬೆಂಗಳೂರು ನಗರದಲ್ಲಿ ತಾಪಮಾನ ತೀವ್ರವಾಗಿ ಕುಸಿಯುತ್ತಿದೆ.

ಇದರೊಂದಿಗೇ, ನಗರದಾದ್ಯಂತ ವೈರಲ್ ಜ್ವರ, ಫ್ಲೂ ಸೋಂಕು ಪ್ರಕರಣಗಳಲ್ಲಿ ಗಣನೀಯ ಏರಿಕೆ ಕಂಡುಬರುತ್ತಿದೆ. ನಗರದ ಆಸ್ಪತ್ರೆಗಳಲ್ಲಿ ಜ್ವರ, ಉಸಿರಾಟದ ಸೋಂಕುಗಳು ಮತ್ತು ಇನ್‌ಫ್ಲುಯೆಂಜಾ ಚಿಕಿತ್ಸೆಗೆ ಬರುವವರ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗಿದೆ ಎಂದು ವರದಿಯಾಗಿದೆ. ಅದರಲ್ಲಿಯೂ ಮಕ್ಕಳಿಗೆ ಶೀತ, ಜ್ವರ ಹೆಚ್ಚು ಬಾಧಿಸುತ್ತಿದ್ದು, ಮಕ್ಕಳ ಇಮ್ಯುನಿಟಿ ಹೆಚ್ಚುಮಾಡಬೇಕಿದೆ.

ಚಳಿಯ ವಾತಾವರಣದಿಂದಾಗಿ ವೈರಲ್ ಸೋಂಕು ಪ್ರಕರಣಗಳಲ್ಲಿ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಆಸ್ತಮಾ ಅಥವಾ ಅಲರ್ಜಿ ಹೊಂದಿರುವ ವ್ಯಕ್ತಿಗಳಲ್ಲಿ ರೋಗಲಕ್ಷಣಗಳು ತೀವ್ರವಾಗಿರಲಿವೆ. ಹೀಗಾಗಿ ಇಂಥ ಸಮಸ್ಯೆ ಇರುವವರು ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕು ಎಂದು ವೈದ್ಯರು, ಆರೋಗ್ಯ ತಜ್ಞರು ಕಿವಿಮಾತು ಹೇಳಿದ್ದಾರೆ.

  • ಶುಚಿತ್ವ ಕಾಪಾಡಿ ಮತ್ತು ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿ ತೆಗೆದುಕೊಂಡ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಿ.
  • ಕಿಕ್ಕಿರಿದ ಜನಸಂದಣಿ ಇರುವ ಅಥವಾ ಕಳಪೆ ಗಾಳಿ ಇರುವ ಪ್ರದೇಶಗಳಲ್ಲಿ ಮಾಸ್ಕ್ ಧರಿಸಿ.
  • ಆಗಾಗ್ಗೆ ಬಿಸಿ ನೀರು ಕುಡಿಯುತ್ತಿರಿ ಮತ್ತು ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಮಾಡಿ.
  • ಸಮಯೋಚಿತ ವೈದ್ಯಕೀಯ ಆರೈಕೆಯನ್ನು ಪಡೆಯಿರಿ ಮತ್ತು ರೋಗಲಕ್ಷಣಗಳು ಉಲ್ಬಣಗೊಂಡರೆ ಅಥವಾ ಮುಂದುವರಿದರೆ ತಜ್ಞ ವೈದ್ಯರನ್ನು ಸಂಪರ್ಕಿಸಿ.
  • ರೋಗಲಕ್ಷಣಗಳನ್ನು ನಿರ್ಲಕ್ಷಿಸಬೇಡಿ.
  • ಅನಾರೋಗ್ಯದ ಸಂದರ್ಭದಲ್ಲಿ ಜನಸಂದಣಿಯಲ್ಲಿ ಬೆರೆಯದಿರಿ.
  • ಸೋಂಕು ತಗುಲಿದಲ್ಲಿ ಔಷಧ, ಚಿಕಿತ್ಸೆ ಜತೆಗೆ ಸಾಕಷ್ಟು ವಿಶ್ರಾಂತಿ ತೆಗೆದುಕೊಳ್ಳಿ ಮತ್ತು ಅತಿಯಾದ ಕೆಲಸವನ್ನು ತಪ್ಪಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.
- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!