ವೈರಲ್ ಆಗುತ್ತಿದೆ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳ ಆಟದ ನೆಪದ ಚುಂಬನ ದೃಶ್ಯಾವಳಿ!

ಹೊಸದಿಗಂತ ವರದಿ , ಮಂಗಳೂರು:

ಮಂಗಳೂರು ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಆಟದ ನೆಪದಲ್ಲಿ ಪರಸ್ಪರ ಚುಂಬಿಸಿದ ವೀಡಿಯೋ ವೈರಲ್ ಆಗಿದೆ.
ವಿದ್ಯಾರ್ಥಿಗಳು ಟ್ರೂ ಆಂಡ್ ಡೇರ್ ಎಂಬ ಆಟವಾಡುವ ವೇಳೆ ನಡೆದ ಘಟನೆ ಎಂಬುದಾಗಿ ಹೇಳಿಕೊಂಡಿದ್ದು, ಈ ವೀಡಿಯೋದಲ್ಲಿದ್ದ ಓರ್ವ ವಿದ್ಯಾರ್ಥಿಯೇ ಇದನ್ನು ತನ್ನ ತರಗತಿಯ ವಾಟ್ಸಾಪ್ ಗುಂಪಿಗೆ ಶೇರ್ ಮಾಡಿದ್ದ ಎನ್ನಲಾಗಿದೆ. ಇದೀಗ ಈ ವೀಡಿಯೋ ವೈರಲ್ ಆಗಿದ್ದು, ಪೊಲೀಸರ ಗಮನಕ್ಕೆ ಬಂದಿದೆ.
ಅಪಾರ್ಟ್‌ಮೆಂಟ್ ಒಂದರಲ್ಲಿ ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳ ಅನುಚಿತ ವರ್ತನೆಯ ವೀಡಿಯೋ ವೈರಲ್‌ಗೆ ಸಂಬಂಧಿಸಿ ಪರಿಶೀಲನೆ ನಡೆಸಲಾಗುತ್ತಿದೆ. ಈ ಘಟನೆ ಕಳೆದ ಜನವರಿಯಲ್ಲಿ ನಡೆದಿದೆ ಎನ್ನಲಾಗಿದೆ. ವೀಡಿಯೋ ಮಾಡಿರುವ ವಿದ್ಯಾರ್ಥಿಯನ್ನು ವಿಚಾರಣೆಗೊಳಪಡಿಸಿ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!