ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳು ನಟ ಅಜಿತ್ ಕುಮಾರ್ ಇತ್ತೀಚಿನ ದಿನಗಳಲ್ಲಿ ಸಿನಿಮಾಗಳಿಗಿಂತ ಕಾರ್ ರೇಸಿಂಗ್‌ನಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದಾರೆ. ವಿದೇಶಗಳಲ್ಲಿ ನಡೆಯುವ ವಿವಿಧ ರೇಸ್‌ಗಳಲ್ಲಿ ಭಾಗವಹಿಸುತ್ತಿರುವ ಅವರು, ಈಗ ಒಂದು ವಿಡಿಯೋ ಮೂಲಕ ಸುದ್ದಿಯಲ್ಲಿದ್ದಾರೆ. ಅಬುಧಾಬಿಯಲ್ಲಿ ನಡೆದ ರೇಸ್ ವೇಳೆ ಅವರನ್ನು ನೋಡಲು ಬಂದ ಅಭಿಮಾನಿಗಳ ಮೇಲೆ ಅಜಿತ್ ಅಸಮಾಧಾನ ವ್ಯಕ್ತಪಡಿಸಿದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವೈರಲ್ ಕ್ಲಿಪ್‌ನಲ್ಲಿ ಅಭಿಮಾನಿಗಳು ಹತ್ತಿರ ಬರಲು ಯತ್ನಿಸಿದಾಗ, “ಇದು ಥಿಯೇಟರ್ ಅಲ್ಲ, ಸರಿಯಾಗಿ ವರ್ತಿಸಿ” ಎಂದು ಅವರು ಗಟ್ಟಿಯಾಗಿ ಹೇಳಿರುವುದು ಕಾಣಿಸಿದೆ. ಈ ನಡೆಗೆ ಕೆಲವರು ಬೆಂಬಲ ನೀಡಿದರೆ, ಇನ್ನೂ ಕೆಲವರು ಟೀಕೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:
‘ವಿದುಮುಯಾರ್ಚಿ’ ಹಾಗೂ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾಗಳ ಬಳಿಕ ಅಜಿತ್ ಹೊಸ ಚಿತ್ರ ಘೋಷಿಸಿಲ್ಲ. ಸೋಶಿಯಲ್ ಮೀಡಿಯಾದಿಂದ ದೂರವಿರುವ ಅವರು, ಅಭಿಮಾನಿಗಳೊಂದಿಗೆ ಅಪರೂಪವಾಗಿ ಮಾತ್ರ ಕಾಣಿಸಿಕೊಳ್ಳುತ್ತಾರೆ. ಇದೇ ಕಾರಣದಿಂದ ಅವರನ್ನು ಕಂಡಾಗ ಫ್ಯಾನ್ಸ್ ಹೆಚ್ಚಿನ ಉತ್ಸಾಹ ತೋರಿಸುತ್ತಾರೆ ಎಂಬ ಮಾತು ಕೇಳಿಬರುತ್ತಿದೆ.



