ಗಜರಾಜನ ಸಿಟ್ಟಿಗೆ ಕಾರು ಧ್ವಂಸ: ವಿಡಿಯೋ ವೈರಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅರಣ್ಯ ಪ್ರದೇಶದಲ್ಲಿ ಆನೆಯೊಂದು ಕಾರನ್ನು ಧ್ವಂಸಗೊಳಿಸಿದ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಟ್ವಿಟ್ಟರ್ ಖಾತೆ ಬೈಟೆನ್ಜ್ಬಿಡೆನ್‌ನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಲಾಗಿದೆ. ಈ ವಿಡಿಯೋ ಪೋಸ್ಟ್ ಮಾಡಿದ ಕೆಲವೇ ನಿಮಿಷಗಳಲ್ಲಿ ಜಗತ್ತಿನಾದ್ಯಂತ ವೈರಲ್ ಆಗಿದೆ. ರಸ್ತೆಗೆ ಬಂದ ಕಾರನ್ನು ತಡೆದ ಆನೆ ಅದರ ಮೇಲೆ ಹತ್ತಿ ಅವಾಂತರ ಸೃಷ್ಟಿಸಿದೆ. ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು ಅದೃಷ್ಟವಶಾತ್‌ ಕಾರಿನಲ್ಲಿದ್ದವರು ಪಾರಾಗಿದ್ದಾರೆ.

ಘಟನೆ ಎಲ್ಲಿ ನಡೆದಿದೆ ಎಂಬುದರ ವಿವರ ತಿಳಿದುಬಂದಿಲ್ಲ. ಈ ವಿಡಿಯೋ ನೋಡಿ ನಿಜಕ್ಕೂ ಶಾಕ್ ಆಗಿದೆ ಎಂದು ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ. ಕಾರಿನಲ್ಲಿದ್ದ ವ್ಯಕ್ತಿಯ ಪರಿಸ್ಥಿತಿ ನೆನೆಸಿಕೊಂಡರೆ ಎದೆ ಝಲ್‌ ಅನ್ನುತ್ತೆ ಎಂದು ಹಲವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!