ಹೊಸಗಂತ ಡಿಜಿಟಲ್ ಡೆಸ್ಕ್
ಚಲಿಸುತ್ತಿದ್ದ ರೈಲಿನ ಮುಂದೆ ಪತ್ನಿಯನ್ನು ತಳ್ಳಿ ಕೊಂದ ವ್ಯಕ್ತಿಯನ್ನು ಬಂಧಿಸಲಾಗಿದೆ. ಸೋಮವಾರ, ವ್ಯಕ್ತಿ ಆಕೆಯನ್ನು ವಸಾಯಿ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ಅವಧ್ ಎಕ್ಸ್‌ಪ್ರೆಸ್ ರೈಲಿನ ಮುಂದೆ ಎಸೆದಿದ್ದಾನೆ. ಸಂತ್ರಸ್ತೆ ಸ್ಥಳದಲ್ಲೇ ಸಾವನ್ನಪ್ಪಿದರು ಮತ್ತು ದೇಹವು ಛಿದ್ರಗೊಂಡಿತ್ತು. ನಂತರ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿತ್ತು.
ಮಹಾರಾಷ್ಟ್ರದ ವಸಾಯಿ ರೋಡ್ ರೈಲು ನಿಲ್ದಾಣದಲ್ಲಿ ಸೋಮವಾರ ಪತ್ನಿಯನ್ನು ಚಲಿಸುತ್ತಿದ್ದ ರೈಲಿನ ಮುಂದೆ ತಳ್ಳಿ ಕೊಂದ ವ್ಯಕ್ತಿಯನ್ನು ಥಾಣೆ ಪೊಲೀಸರು ಇಂದು ಬಂಧಿಸಿದ್ದಾರೆ. ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ರೈಲಿನಡಿ ತಳ್ಳಿ ಕೊಲ್ಲುತ್ತಿರುವ ಭಯಾನಕ ಸಿಸಿಟಿವಿ ವೀಡಿಯೋದಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಈ ವಿಡಿಯೋದಲ್ಲಿ ವ್ಯಕ್ತಿ ತನ್ನ ಹೆಂಡತಿಯನ್ನು ಎಬ್ಬಿಸಿ ರೈಲು ಹಳಿಗಳ ಕಡೆಗೆ ಎಳೆದುಕೊಂಡು ಹೋಗುವುದನ್ನು ಕಾಣಬಹುದು. ನಂತರ ಆಕೆಯನ್ನು ಚಲಿಸುತ್ತಿದ್ದ ಅವಧ್ ಎಕ್ಸ್ ಪ್ರೆಸ್ ರೈಲಿನ ಮುಂದೆ ತಳ್ಳಿದ್ದ. ಸೋಮವಾರ ಮುಂಜಾನೆ 4 ಗಂಟೆ ಸುಮಾರಿಗೆ ಈ ಭೀಕರ ಘಟನೆ ನಡೆದಿತ್ತು.
ಘಟನೆಯಲ್ಲಿ ಸಂತ್ರಸ್ತೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಛಿದ್ರಗೊಂಡ ದೇಹವನ್ನು ನಂತರ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆಯ ನಂತರ ವ್ಯಕ್ತಿ ತನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ಅಲ್ಲಿಂದ ಪರಾರಿಯಾಗುವುದನ್ನು ಸಿಸಿಟಿವಿ ದೃಶ್ಯಾವಳಿಗಳು ತೋರಿಸಿದ್ದವು.
ಆ ವ್ಯಕ್ತಿ ನಂತರ ಮುಂಬೈನ ದಾದರ್‌ಗೆ ರೈಲು ಹತ್ತಿ ಅಲ್ಲಿಂದ ಥಾಣೆಯ ಕಲ್ಯಾಣ್‌ಗೆ ಹೋಗುತ್ತಿರುವುದನ್ನು ಗಮನಿಸಿ ಥಾಣೆಯ ಭಿವಂಡಿ ಪಟ್ಟಣದಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಆರೋಪಿಗೆ ತನ್ನ ಪತ್ನಿಯ ಚಾರಿತ್ರ್ಯದ ಬಗ್ಗೆ ಅನುಮಾನ ವಿದ್ದುದು ಘಟನೆಗೆ ಕಾರಣವಾಯಿತು ಎಂಬ ವಿಚಾರ ಪ್ರಾಥಮಿಕ ತನಿಖೆ ವೇಳೆ ತಿಳಿದುಬಂದಿದೆ. ಅವನ ಹೆಂಡತಿಯು ಆತನ ಸ್ನೇಹಿತನೊಂದಿಗೆ ಎರಡು ದಿನಗಳ ಕಾಲ ಹೊರಗೆ ಹೋಗಿದ್ದಳು. ಇದು ಅವನಿಗೆ ಕಿರಿಕಿರಿ ಉಂಟುಮಾಡಿತ್ತು. ಈ ವಿಚಾರವಾಗಿ ಅಬ್ಬರಿಬ್ಬರು ಜಗಳವಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಆರೋಪಿಯನ್ನು ಬಂಧಿಸಿದ ಪೊಲೀಸ್ ತಂಡವನ್ನು ರೈಲ್ವೆ ಉಪ ಪೊಲೀಸ್ ಆಯುಕ್ತ ಸಂದೀಪ್ ಬಾಜಿಬಖ್ರೆ ಶ್ಲಾಘಿಸಿದ್ದಾರೆ.