VIRAL | ಪಾಕ್‌ ವಿರುದ್ಧ ವಿರಾಟ್‌ ಶತಕ ಸಂಭ್ರಮ! ಸಾಮಾಜಿಕ ಜಾಲತಾಣಗಳಲ್ಲಿ ಕಿಂಗ್‌ ಕೊಹ್ಲಿ ಹವಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪಾಕಿಸ್ತಾನ ವಿರುದ್ಧದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಗೆಲುವಿನ ಶತಕ ಬಾರಿಸಿದ ವಿರಾಟ್ ಕೊಹ್ಲಿ, ಈ ಒಂದು ಶತಕದೊಂದಿಗೆ ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ.

ಅಲ್ಲದೆ ಆರಂಭದಿಂದಲೂ ಕೊನೆಯವರೆಗೂ ಅಜೇಯರಾಗಿ ಉಳಿದು ತಂಡವನ್ನು ಜಯದ ದಡ ಮುಡಿಸಿದ್ದಾರೆ. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಸೆಮಿಫೈನಲ್ ಸುತ್ತಿಗೆ ಭಾಗಶಃ ಅರ್ಹತೆ ಪಡೆದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕಿಂಗ್‌ ಕೊಹ್ಲಿ ಹವಾ ಹೆಚ್ಚಾಗಿದೆ. ಜನರ ವಾಟ್ಸಾಪ್‌ ಹಾಗೂ ಇನ್ಸ್ಟಾ ಸ್ಟೋರಿಗಳಲ್ಲಿ ಕಿಂಗ್‌ ಕೊಹ್ಲಿ ಫೋಟೊ ರಾರಾಜಿಸುತ್ತಿದೆ.

ಈ ಬಾರಿ ನಡೆದ ಚಾಂಪಿಯನ್ಸ್‌ ಟ್ರೋಫಿ ಪಂದ್ಯದಲ್ಲಿ ಭಾರತಕ್ಕೆ ಆರಂಭದಲ್ಲಿ ರನ್ ಗಳಿಸುವುದು ಸವಾಲಾಗಿತ್ತು. ಏಕೆಂದರೆ ಆರಂಭದಲ್ಲಿಯೇ ರೋಹಿತ್​ರನ್ನು ಔಟ್ ಮಾಡುವ ಮೂಲಕ ಪಾಕಿಸ್ತಾನ ಬೌಲರ್‌ಗಳು ಉತ್ತಮ ಹಿಡಿತ ಸಾಧಿಸಿದರು. ಅಂತಹ ಪರಿಸ್ಥಿತಿಯಲ್ಲಿ ತಂಡದ ಇನ್ನಿಂಗ್ಸ್ ಜವಾಬ್ದಾರಿ ಹೊತ್ತ ವಿರಾಟ್ ಕೊಹ್ಲಿ ಶತಕದ ಇನ್ನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 111 ಎಸೆತಗಳಲ್ಲಿ 7 ಬೌಂಡರಿಗಳ ಸಹಿತ ಅಜೇಯ 100 ರನ್ ಕಲೆಹಾಕಿದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!