ಏಕದಿನ ಕ್ರಿಕೆಟ್​ನಲ್ಲಿ ಇತಿಹಾಸ ನಿರ್ಮಿಸಿದ ವಿರಾಟ್: ಸಚಿನ್​ ದಾಖಲೆ ಮುರಿದ ಕಿಂಗ್ ಕೊಹ್ಲಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:
 
ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಇದರ ಜೊತೆಗೆ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರನ್ನು ಸಹ ಹಿಂದಿಕ್ಕಿದ್ದಾರೆ.

ತಾನು ಆಡಿರೋ 287 ಏಕದಿನ ಇನ್ನಿಂಗ್ಸ್​ನಲ್ಲಿ 14 ಸಾವಿರ ರನ್​​ ಪೂರೈಸಿದ್ದಾರೆ.

ಪ್ರಸ್ತುತ ಕಾಲದ ಅತ್ಯುತ್ತಮ ಏಕದಿನ ಬ್ಯಾಟರ್‌ಗಳಲ್ಲಿ ವಿರಾಟ್ ಕೊಹ್ಲಿ ಒಬ್ಬರು. ಇವರು ಟೀಮ್ ಇಂಡಿಯಾ ದಿಗ್ಗಜ ಬ್ಯಾಟರ್ ಸಚಿನ್ ತೆಂಡೂಲ್ಕರ್ ಮತ್ತು ಶ್ರೀಲಂಕಾ ಮಾಜಿ ಕ್ಯಾಪ್ಟನ್​ ಕುಮಾರ್ ಸಂಗಕ್ಕಾರ ಅವರಿಂದ ಸಾಧ್ಯವಾಗದ ಸಾಧನೆಯನ್ನು ಮಾಡಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಅತಿವೇಗವಾಗಿ 14000 ರನ್‌ಗಳನ್ನು ಪೂರ್ಣಗೊಳಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಸಚಿನ್ 14000 ರನ್​​​ 350 ಇನ್ನಿಂಗ್ಸ್​ನಲ್ಲಿ ಪೂರೈಸಿದರು. ಸಂಗಕ್ಕಾರ 378 ಇನ್ನಿಂಗ್ಸ್‌ಗಳಲ್ಲಿ ದಾಖಲೆ ಮಾಡಿದರು. ಈಗ ಕೊಹ್ಲಿ ಕೇವಲ 287 ಇನ್ನಿಂಗ್ಸ್​ನಲ್ಲಿ 57.88 ಸರಾಸರಿಯಲ್ಲಿ 14000 ರನ್ ಗಳಿಸಿದ್ದಾರೆ.

ವಿರಾಟ್ ಕೊಹ್ಲಿ ಏಕದಿನ ಇತಿಹಾಸದಲ್ಲಿ ಅತಿ ಹೆಚ್ಚು ಶತಕ ಗಳಿಸಿದ ಬ್ಯಾಟರ್. ಸಚಿನ್ ತೆಂಡೂಲ್ಕರ್ ಅವರ 49 ಏಕದಿನ ಶತಕಗಳನ್ನು ಹಿಂದಿಕ್ಕುವ ಮೂಲಕ ಅವರು ಈ ಸಾಧನೆ ಮಾಡಿದ್ದಾರೆ. ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ 50 ಶತಕಗಳು ಮತ್ತು 72 ಅರ್ಧಶತಕಗಳನ್ನು ಹೊಂದಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!