Friday, March 24, 2023

Latest Posts

100ನೇ ಟೆಸ್ಟ್‌ ಪಂದ್ಯದಲ್ಲಿ ದಾಖಲೆ ಬರೆದ ವಿರಾಟ್ ಕೊಹ್ಲಿ: 8000 ಟೆಸ್ಟ್ ರನ್‌ʼ ಗಳಿಸಿದ 6ನೇ ಭಾರತೀಯ ಹೆಗ್ಗಳಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಹಾಗೂ ಶ್ರೀಲಂಕಾ ನಡುವೆ ಇಂದು ಮೊದಲ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ಈ ಸ್ಮರಣೀಯ ಟೆಸ್ಟ್ ಪಂದ್ಯದ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿಗೆ 100ನೇ ಟೆಸ್ಟ್‌ ಪಂದ್ಯವಾಗಿದ್ದು, ವಿಶೇಷ ದಾಖಲೆ ನಿರ್ಮಿಸಿದ್ದಾರೆ.
ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್​ನ ವೃತ್ತಿಜೀವನದಲ್ಲಿ ಬರೋಬ್ಬರಿ 8 ಸಾವಿರ ರನ್ ಗಡಿ ದಾಟುವ ಮೂಲಕ ದಾಖಲೆ ಬರೆದಿದ್ದಾರೆ. 38 ರನ್ ಬಾರಿಸುತ್ತಿದ್ದಂತೆಯೇ ಟೆಸ್ಟ್ ಕ್ರಿಕೆಟ್‌ನಲ್ಲಿ 8 ಸಾವಿರ ರನ್ ಪೂರೈಸುವ ಮೂಲಕ ಆಸ್ಟ್ರೇಲಿಯಾದ ಕ್ರಿಕೆಟ್‌ ದಿಗ್ಗಜ ರಿಕಿ ಪಾಂಟಿಂಗ್ ದಾಖಲೆಯನ್ನು ಸರಿಗಟ್ಟಿದರು.
ಈ ಮೂಲಕ ಈ ಸಾಧನೆಗೈದ 6ನೇ ಭಾರತೀಯ ಅನ್ನೋ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ವೀರೇಂದ್ರ ಸೆಹ್ವಾಗ್, ಸುನಿಲ್ ಗವಾಸ್ಕರ್ ಮತ್ತು ವಿವಿಎಸ್ ಲಕ್ಷ್ಮಣ್ ಈ ಸಾಧನೆ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!