ಏಕದಿನ ಕ್ರಿಕೆಟ್ ಇತಿಹಾಸದಲ್ಲಿ 50ನೇ ಶತಕ ಸಿಡಿಸಿ ಸಂಭ್ರಮಿಸಿದ ವಿರಾಟ್ ಕೊಹ್ಲಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಟೀಂ ಇಂಡಿಯಾ ರನ್ ಮಷೀನ್ ವಿರಾಟ್ ಕೊಹ್ಲಿ 50ನೇ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ.

2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು ಬ್ಯಾಟಿಂಗ್ ನಡೆಸಿದ ವಿರಾಟ್ ಕೊಹ್ಲಿ ವೃತ್ತಿಜೀವನದ 50ನೇ ಏಕದಿನ ಶತಕ ಸಿಡಿಸಿ ಅಬ್ಬರಿಸಿದ್ದಾರೆ.

ಇದು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಬಾರಿಸಿದ ಒಟ್ಟಾರೆ 80ನೇ ಶತಕವಾಗಿದೆ.

ನ ವಾಂಖೇಡೆ ಮೈದಾನದಲ್ಲಿ ರೋಹಿತ್ ಶರ್ಮಾ ವಿಕೆಟ್ ಪತನದ ಬಳಿಕ ಕ್ರೀಸ್‌ಗಿಳಿದ ವಿರಾಟ್ ಕೊಹ್ಲಿ, ಆರಂಭದಲ್ಲಿ ಸಾಕಷ್ಟು ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದರು.

ಕಿವೀಸ್ ಎದುರು ಆಕರ್ಷಕ ಅರ್ಧಶತಕ ಸಿಡಿಸುತ್ತಿದ್ದಂತೆಯೇ, ಸಚಿನ್ ತೆಂಡುಲ್ಕರ್ ಹಾಗೂ ಶಕೀಬ್ ಅಲ್ ಹಸನ್ ಹೆಸರಿನಲ್ಲಿದ್ದ ಅಪರೂಪದ ದಾಖಲೆಯನ್ನು ತಮ್ಮ ಹೆಸರಿಗೆ ಬರೆಸಿಕೊಳ್ಳುವಲ್ಲಿ ಯಶಸ್ವಿಯಾದರು. ಈ ಮೊದಲು ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತಿಹೆಚ್ಚು ಬಾರಿ 50+ ರನ್ ಬಾರಿಸಿದ ದಾಖಲೆ ಸಚಿನ್ ಹಾಗೂ ಶಕೀಬ್ ಹೆಸರಿನಲ್ಲಿತ್ತು. ಕಳೆದ ಪಂದ್ಯದಲ್ಲಿ ಕೊಹ್ಲಿ 51 ರನ್ ಬಾರಿಸುವ ಮೂಲಕ ಆ ದಾಖಲೆ ಸರಿಗಟ್ಟಿದ್ದರು. ಇದೀಗ 8ನೇ ಬಾರಿಗೆ 50+ ರನ್ ಬಾರಿಸುವ ಮೂಲಕ ಅಪರೂಪದ ದಾಖಲೆ ಕೊಹ್ಲಿ ಪಾಲಾಗಿದೆ.

ಇದೀಗ ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತಿಹೆಚ್ಚು ರನ್ ಬಾರಿಸಿದ ಬ್ಯಾಟರ್ ಎನ್ನುವ ಹಿರಿಮೆಗೂ ಪಾತ್ರರಾಗಿದ್ದಾರೆ. ಈ ಮೊದಲು ಸಚಿನ್ ತೆಂಡುಲ್ಕರ್ 2003ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ 673 ರನ್ ಬಾರಿಸಿದ್ದರು. ಆದರೆ ಇದೀಗ ಕೊಹ್ಲಿ ರನ್ ಬಾರಿಸಿ ಮುನ್ನುಗ್ಗುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!