ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿರಾಟ್ ಕೊಹ್ಲಿ ಏಕದಿನ ವೃತ್ತಿ ಜೀವನ ಆರಂಭಿಸಿ 17 ವರ್ಷಗಳಾಗಿವೆ. ಈ ಹದಿನೇಳು ವರ್ಷಗಳಲ್ಲಿ ಒಮ್ಮೆಯೂ ಅವರು ಬ್ಯಾಕ್ ಟು ಬ್ಯಾಕ್ ಡಕ್ ಔಟ್ ಆಗಿರಲಿಲ್ಲ. ಆದರೆ ಇದೇ ಮೊದಲ ಬಾರಿಗೆ ಕೊಹ್ಲಿಯನ್ನು ಸತತ ಶೂನ್ಯಕ್ಕೆ ಔಟ್ ಮಾಡುವಲ್ಲಿ ಆಸ್ಟ್ರೇಲಿಯಾ ವೇಗಿಗಳು ಯಶಸ್ವಿಯಾಗಿದ್ದಾರೆ.
ಅಡಿಲೇಡ್ನ ಓವಲ್ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿಯನ್ನು ಎಲ್ಬಿಡಬ್ಲ್ಯೂ ಮಾಡುವಲ್ಲಿ ಆಸೀಸ್ ವೇಗಿ ಕ್ಸೇವಿಯರ್ ಬಾರ್ಟ್ಲೆಟ್ ಯಶಸ್ವಿಯಾಗಿದ್ದಾರೆ.
ಇದಕ್ಕೂ ಮುನ್ನ ಪರ್ತ್ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮಿಚೆಲ್ ಸ್ಟಾರ್ಕ್ಗೆ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು. ಇದೀಗ ಮತ್ತೆ ಸೊನ್ನೆ ಸುತ್ತುವ ಮೂಲಕ ಕಿಂಗ್ ಕೊಹ್ಲಿ ತಮ್ಮ ಏಕದಿನ ವೃತ್ತಿಜೀವನದಲ್ಲಿ ಇದೇ ಮೊದಲ ಬಾರಿಗೆ ಬ್ಯಾಕ್ ಟು ಬ್ಯಾಕ್ ಡಕೌಟ್ ಆಗಿದ್ದಾರೆ.
17 ವರ್ಷಗಳ ಇತಿಹಾಸದಲ್ಲಿ ವಿರಾಟ್ ಕೊಹ್ಲಿ ಹೀಗೆ ಔಟ್ ಆಗಿರಲಿಲ್ಲ!

