ಹೊಸದಿಗಂತ ಡಿಜಿಟಲ್ ಡೆಸ್ಕ್:
2023ನೇ ಸಾಲಿನ ವರ್ಷದ ಏಕದಿನ ಕ್ರಿಕೆಟಿಗ ಪ್ರಶಸ್ತಿಗೆ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿಗೆ (Virat Kohli) ಭಾಜನರಾಗಿದ್ದಾರೆ.
ಕೊಹ್ಲಿ ಇದಕ್ಕೂ ಮೊದಲು ಮೂರು ಬಾರಿ ಈ ಪ್ರಶಸ್ತಿ ಗೆದ್ದಿದ್ದರು. ನಾಲ್ಕನೇ ಬಾರಿಗೆ ಈ ಪ್ರಶಸ್ತಿ ಗೆಲ್ಲುವ ಮೂಲಕ ವಿಶ್ವ ಕ್ರಿಕೆಟ್ನಲ್ಲಿ ಅತಿ ಹೆಚ್ಚು ಬಾರಿ ವರ್ಷದ ಏಕದಿನ ಪ್ರಶಸ್ತಿ ಗೆದ್ದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಭಾಜನರಾಗಿದ್ದಾರೆ.
2023 ರಲ್ಲಿ ನಡೆದ ಏಕದಿನ ವಿಶ್ವಕಪ್ನಲ್ಲಿ (ODI World Cup 2023) ಅಮೋಘ ಬ್ಯಾಟಿಂಗ್ ಮೂಲಕ ದಾಖಲೆ ನಿರ್ಮಿಸಿದ್ದ ಕೊಹ್ಲಿ ಬರೋಬ್ಬರಿ 765 ರನ್ ಕಲೆಹಾಕಿದ್ದರು. ಈ ಮೂಲಕ ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಒಂದು ಆವೃತ್ತಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ್ದ ಮೊದಲ ಬ್ಯಾಟರ್ ಎಂಬ ದಾಖಲೆ ಬರೆದಿದ್ದರು.