ಫಾರ್ಮ್ ಗೆ ಮರಳಿದ ವಿರಾಟ್ ಕೊಹ್ಲಿ: ಐಸಿಸಿ ರೆಡಿಯಾಯಿತು ಗಿಫ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟಿ20 ವಿಶ್ವಕಪ್ ಟೂರ್ನಿ ಯಲ್ಲಿ ಉತ್ತಮ ಬ್ಯಾಟಿಂಗ್ ನಡೆಸುತ್ತಿರುವ ವಿರಾಟ್ ಕೊಹ್ಲಿ ಇದೀಗ ಐಸಿಸಿ ತಿಂಗಳ ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೂಪರ್ 12 ಹಂತದ 5 ಪಂದ್ಯದಲ್ಲಿ ವಿರಾಟ್ ಕೊಹ್ಲಿ 246 ರನ್ ಸಿಡಿಸಿದ್ದಾರೆ ಇದರಲ್ಲಿ 3 ಅರ್ಧಶತಕ ಒಳಗೊಂಡಿದೆ.

ಸತತ ವೈಫಲ್ಯದಿಂದ ಟೀಕೆಗೆ ಗುರಿಯಾಗಿದ್ದ ವಿರಾಟ್ ಕೊಹ್ಲಿ ಇದೀಗ ಅತ್ಯುತ್ತಮ ತಿಂಗಳ ಕ್ರಿಕೆಟಿಗ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಈ ಮೂಲಕ ಟೀಕೆಗಳಿಗೆ ತಮ್ಮ ಪ್ರದರ್ಶನದ ಮೂಲಕ ಉತ್ತರಿಸಿದ್ದಾರೆ.

ಟಿ20 ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ದದಕೊಹ್ಲಿ ಅಜೇಯ 82 ರನ್ ಸಿಡಿಸಿದ್ದರು. ಈ ಮೂಲಕ ಭಾರತವನ್ನು ಗೆಲುವಿನ ದಡ ಸೇರಿಸಿದ್ದರು.

ಭಾರತದ ವಿರಾಟ್‌ ಕೊಹ್ಲಿ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಗರಿಷ್ಠ ರನ್‌ ಸರದಾರ ಎನಿಸಿಕೊಂಡಿದ್ದಾರೆ. ಬುಧವಾರ ಬಾಂಗ್ಲಾದೇಶ ವಿರುದ್ಧ ಔಟಾಗದೆ 64 ರನ್‌ ಸಿಡಿಸಿದ ಕೊಹ್ಲಿ ಮೊದಲ ಸ್ಥಾನಕ್ಕೇರಿದರು. ಶ್ರೀಲಂಕಾದ ಮಹೇಲಾ ಜಯವರ್ಧನೆ ಅವರ ದಾಖಲೆಯನ್ನು ವಿರಾಟ್‌ ಮುರಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!