ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಟೆಸ್ಟ್ ಕ್ರಿಕೆಟ್ ವೃತ್ತಿ ಜೀವನಕ್ಕೆ ಹಠಾತ್ ವಿದಾಯದ ಹೇಳಿದ್ದ ವಿರಾಟ್ ಕೊಹ್ಲಿ ಸದ್ಯ ತಮ್ಮ ರಜೆ ದಿನಗಳನ್ನು ಎಂಜಾಯ್ ಮಾಡುತ್ತಿದ್ದು, ಇದರ ನಡುವೆ ಮೊದಲ ಬಾರಿಗೆ ಹಠಾತ್ ವಿದಾಯದ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
IPL ಟೂರ್ನಿಯ ಸಂದರ್ಭದಲ್ಲಿ ಟೆಸ್ಟ್‌ಗೆ ವಿದಾಯ ಹೇಳಿದ್ದ ಕೊಹ್ಲಿ ಆ ಮೂಲಕ ಇಡೀ ಕ್ರಿಕೆಟ್ ಜಗ್ಗತಿಗೆ ಶಾಕ್ ನೀಡಿದ್ದರು. ಇದೀಗ ಲಂಡನ್‌ನಲ್ಲಿ ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ ಅವರ ಚಾರಿಟಿ ಕಾರ್ಯಕ್ರಮವೊಂದರಲ್ಲಿ ವಿರಾಟ್ ಕೊಹ್ಲಿ ವಿದಾಯ ಬಗ್ಗೆ ಮಾತನಾಡಿದ್ದಾರೆ.
ಕಾರ್ಯಕ್ರಮದಲ್ಲಿ ವಿರಾಟ್ ಕೊಹ್ಲಿಗೆ ಟೆಸ್ಟ್ ನಿವೃತ್ತಿ ಬಗ್ಗೆ ಪ್ರಶ್ನೆಯನ್ನು ಕೇಳಲಾಯಿತು. ಇದಕ್ಕೆ ಅವರು ನಿಜವಾದ ಕಾರಣವನ್ನು ಹಾಸ್ಯಮಯವಾಗಿ ವಿವರಿಸಿದ್ದಾರೆ.
ಎರಡು ದಿನಗಳ ಹಿಂದೆ ನನ್ನ ಗಡ್ಡಕ್ಕೆ ಬಣ್ಣ ಹಚ್ಚಿಕೊಂಡಿದ್ದೇನೆ. ಪ್ರತೀ ನಾಲ್ಕು ದಿನಗಳಿಗೊಮ್ಮೆ ನಿಮ್ಮ ಗಡ್ಡಕ್ಕೆ ಬಣ್ಣ ಹಚ್ಚುವ ಸಮಯ ಬಂದಾಗಿದೆ ಎಂಬುದು ನಿಮಗೆ ಗೊತ್ತಿರಲಿ ಎಂದು ವಿರಾಟ್ ಕೊಹ್ಲಿ ನಗು ಮುಖದಲ್ಲಿ ತಿಳಿಸಿದ್ದಾರೆ.