ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನ ಹಾಗೂ ಭಾರತ ನಡುವಿನ ಯುದ್ಧದ ಭೀತಿ ಬೆನ್ನಲ್ಲೇ ಸುರಕ್ಷತೆ ದೃಷ್ಟಿಯಿಂದ ಐಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳನ್ನು ಸದ್ಯದ ಮಟ್ಟಿಗೆ ಸ್ಥಗಿತಗೊಳಿಸಲಾಗಿದೆ.
ಈ ಬೆನ್ನಲ್ಲೇ ಟ್ವೀಟ್ ಮೂಲಕ ವಿರಾಟ್ ಕೊಹ್ಲಿ ಫಸ್ಟ್ ರಿಯಾಕ್ಷನ್ ನೀಡಿದ್ದಾರೆ. ಈ ಕಷ್ಟದ ಸಮಯದಲ್ಲಿ ನಮ್ಮ ದೇಶವನ್ನು ರಕ್ಷಿಸುತ್ತಿರುವುದಕ್ಕಾಗಿ ಭಾರತೀಯ ಸೇನೆಗೆ ಸೆಲ್ಯೂಟ್. ನಾವು ನಮ್ಮ ಸಶಸ್ತ್ರ ಪಡೆಗಳೊಂದಿಗೆ ಒಗ್ಗಟ್ಟಿನಿಂದ ಇರುತ್ತೇವೆ. ನಮ್ಮ ವೀರ ಯೋಧರ ಅಚಲ ಧೈರ್ಯ, ಅವರು ಮತ್ತು ಅವರ ಕುಟುಂಬದವರು ನಮ್ಮ ದೇಶಕ್ಕಾಗಿ ಮಾಡುವ ತ್ಯಾಗಗಳಿಗೆ ನಾವು ಸದಾ ಕೃತಜ್ಞರಾಗಿರುತ್ತೇವೆ ಎಂದು ವಿರಾಟ್ ಕೊಹ್ಲಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.