March 27, 2026
Friday, March 27, 2026
spot_img

VIROSH ವಿವಾಹ: ಆರತಕ್ಷತೆಗೆ ಸ್ಯಾಂಡಲ್‌ವುಡ್‌ನ 11 ಮಂದಿಗಷ್ಟೇ ಆಹ್ವಾನ ಅಂತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ ಇಂದು ರಾಜಸ್ಥಾನದ ಉದಯಪುರದಲ್ಲಿ ಕುಟುಂಬ ಹಾಗೂ ಆಪ್ತರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಳಗ್ಗೆ ನಡೆದ ಶುಭ ಮುಹೂರ್ತದಲ್ಲಿ ‘ವಿರೋಶ್’ ಜೋಡಿ ಮದುವೆ ಶಾಸ್ತ್ರಗಳನ್ನು ನೆರವೇರಿಸಿಕೊಂಡಿದ್ದಾರೆ.

ಮದುವೆ ಸಮಾರಂಭವನ್ನು ಖಾಸಗಿ ರೀತಿಯಲ್ಲಿ ಆಯೋಜಿಸಲಾಗಿದ್ದು, ಚಿತ್ರರಂಗದ ಕೆಲವು ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿದೆ ಎನ್ನಲಾಗಿದೆ. ನಟಿ ಆಶಿಕಾ ರಂಗನಾಥ್ ಅವರಿಗೆ ಆಹ್ವಾನ ಬಂದಿರುವ ಸುಳಿವು ಸಾಮಾಜಿಕ ಜಾಲತಾಣದ ಮೂಲಕ ಹೊರಬಿದ್ದಿದೆ.

ಇದನ್ನೂ ಓದಿ:

ಇದೇ ವೇಳೆ, ಮಾರ್ಚ್ 4ರಂದು ಹೈದರಾಬಾದ್‌ನಲ್ಲಿ ಆರತಕ್ಷತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಶಿವರಾಜ್ ಕುಮಾ‌ರ್, ಕಿಚ್ಚ ಸುದೀಪ್, ಯಶ್, ರವಿಚಂದ್ರನ್, ಧ್ರುವ ಸರ್ಜಾ, ಗಣೇಶ್, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್, ನಿರ್ದೇಶಕರಾದ ಎ.ಹರ್ಷ, ನಂದ ಕಿಶೋರ್, ಸಿಂಪಲ್ ಸುನಿ ಆರತಕ್ಷತೆಗೆ ಆಹ್ವಾನ ಹೋಗಿದೆ ಎನ್ನಲಾಗಿದೆ.

‘ಕಿರಿಕ್ ಪಾರ್ಟಿ’ ಚಿತ್ರದ ಮೂಲಕ ಸಿನಿ ಬದುಕು ಆರಂಭಿಸಿದ ರಶ್ಮಿಕಾ, ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿ ನಂತರ ತೆಲುಗು ಮತ್ತು ಹಿಂದಿ ಚಿತ್ರರಂಗದಲ್ಲೂ ಹೆಸರು ಗಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !