BOLLYWOOD| ಎರಡನೇ ಮಗುವಿನ ನಿರೀಕ್ಷೆಯಲ್ಲಿ ʻವಿರುಷ್ಕಾʼ ದಂಪತಿ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸ್ಟಾರ್‌ ಕ್ರಿಕೆಟಿಗ ವಿರಾಟ್ ಕೊಹ್ಲಿ, ಮತ್ತವರ ಪತ್ನಿ ಅನುಷ್ಕಾ ಶರ್ಮಾ ತಮ್ಮ 2 ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ಹಿಂದೂಸ್ತಾನ್ ಟೈಮ್ಸ್ ವರದಿಯನ್ನು ಉಲ್ಲೇಖಿಸಿ ಹಲವು ರಾಷ್ಟ್ರೀಯ ಮಾಧ್ಯಮಗಳು ಸುದ್ದಿ ಬಿತ್ತರಿಸಿವೆ. ಆದರೆ, ಇದುವರೆಗೂ ಸ್ಟಾರ್‌ ದಂಪತಿಯಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಅನುಷ್ಕಾ ಶರ್ಮಾ ಮತ್ತೆ ತಾಯಿಯಾಗುತ್ತಿರುವುದರಿಂದಾಗಿ ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲಿಯೂ ಕಾಣುತ್ತಿಲ್ಲ ಎಂಬ ಸುದ್ದಿಗಳೂ ಓಡಾಡುತ್ತಿವೆ. ಸದ್ಯ ಅನುಷ್ಕಾ ಗರ್ಭಧಾರಣೆಯ ಎರಡನೇ ತ್ರೈಮಾಸಿಕದಲ್ಲಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ಬಹಿರಂಗಪಡಿಸಿದೆ.

ಪ್ರಸ್ತುತ ಹರಿದಾಡುತ್ತಿರುವ ಸುದ್ದಿಯ ಸತ್ಯಾಸತ್ಯತೆಯ ಬಗ್ಗೆ ಸ್ಟಾರ್‌ ದಂಪತಿಯೇ ಸ್ಪಷ್ಟನೆ ನೀಡಬೇಕಿದೆ. 2017ರಲ್ಲಿ ಇಬ್ಬರೂ ವೈವಾಹಿಕ ಜೀವನಕ್ಕೆ ಕಾಲಿರಿಸಿದ ಈ ಜೋಡಿ, ಈಗಾಗಲೇ ಮುದ್ದಾದ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!