ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ, ವಿರಾಟ್ ಕೊಹ್ಲಿ ತಮ್ಮ ಪತ್ನಿ, ನಟಿ ಅನುಷ್ಕಾ ಶರ್ಮಾ ಅವರೊಂದಿಗೆ ವೃಂದಾವನಕ್ಕೆ ಭೇಟಿ ನೀಡಿದ್ದಾರೆ. ಇತ್ತೀಚೆಗೆ ಆಧ್ಯಾತ್ಮದ ಕಡೆ ಒಲವು ತೋರಿಸಿರುವ ವಿರುಷ್ಕಾ ಜೋಡಿ ಪ್ರೇಮಾನಂದ ಜಿ ಮಹಾರಾಜ್ ಸ್ವಾಮೀಜಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.
ಪ್ರೇಮಾನಂದ ಸ್ವಾಮೀಜಿ ವಿರಾಟ್ ಕೊಹ್ಲಿ ಬಳಿ ನೀವು ಸಂತೋಷವಾಗಿದ್ದೀರಾ ಎಂದು ಕೇಳಿದ್ದಾರೆ. ಇದಕ್ಕೆ ಕೊಹ್ಲಿ ನಾವು ಚೆನ್ನಾಗಿದ್ದೇವೆ ಎಂದು ಪ್ರತಿಕ್ರಿಯಿಸಿದ್ದಾರೆ. ಆಗ ಪ್ರೇಮಾನಂದ ಸ್ವಾಮೀಜಿ ನೀವು ಚೆನ್ನಾಗಿರಬೇಕು ಎಂದು ಹೇಳಿರುವ ವೀಡಿಯೋ ಇದೀಗ ಫುಲ್ ವೈರಲ್ ಆಗಿದೆ.
ವಿರುಷ್ಕಾ ದಂಪತಿ ಮಕ್ಕಳೊಂದಿಗೆ ಈ ವರ್ಷದಲ್ಲಿ ಪ್ರೇಮಾನಂದ್ ಜಿ ಮಹಾರಾಜ್ ಅವರ ಆಶೀರ್ವಾದ ಪಡೆದಿದ್ದರು. ಇದೀಗ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ವೃಂದಾವನಕ್ಕೆ ಭೇಟಿ ನೀಡಿದ್ದಾರೆ.
Virat Kohli & Anushka Sharma से पूज्य महाराज जी की क्या वार्तालाप हुई ? Bhajan Marg pic.twitter.com/7IWWjIfJHB
— Bhajan Marg (@RadhaKeliKunj) May 13, 2025