July 9, 2026
Thursday, July 9, 2026
spot_img

ವಿಶಾಖಪಟ್ಟಣದ ಉಕ್ಕು ಸ್ಥಾವರ ದುರಂತ: ಮೃತ ಕಾರ್ಮಿಕರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವಿಶಾಖಪಟ್ಟಣಂನ ಉಕ್ಕು ಸ್ಥಾವರದಲ್ಲಿ ಭಾರೀ ಪ್ರಮಾಣದ ಕರಗಿದ ಲೋಹ ಹರಿದು ಎಂಟು ಮಂದಿ ಮೃತಪಟ್ಟಿದ್ದಾರೆ. ಮೃತರ ಕುಟುಂಬಕ್ಕೆ ಇದೀಗ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ.

ನಿನ್ನೆ ವಿಶಾಖಪಟ್ಟಣದ ಉಕ್ಕು ಸ್ಥಾವರಗಳಲ್ಲಿ ಟನ್‌ಗಳಷ್ಟು ಕರಗಿದ ಲೋಹವಿದ್ದ ದೊಡ್ಡ ಬಕೆಟ್‌ ಉರುಳಿ ಬಿದ್ದಿದೆ. ಇದರಿಂದಾಗಿ ದೊಡ್ಡ ಪ್ರಮಾಣದ ಬೆಂಕಿ ಹೊತ್ತಿದೆ. ಈ ಬೆಂಕಿಯಿಂದ ಎಂದು ಮಂದಿ ಮೃತಪಟ್ಟಿದ್ದು, ಇವರ ಕುಟುಂಬಕ್ಕೆ ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್‌.ಡಿ. ಕುಮಾರಸ್ವಾಮಿ ಪರಿಹಾರ ಘೋಷಣೆ ಮಾಡಿದ್ದಾರೆ.

ನಿನ್ನೆ ತಡರಾತ್ರಿ ದುರಂತ ನಡೆದ ಸ್ಥಳಕ್ಕೆ ಎಚ್‌ಡಿಕೆ ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಗಾಯಗೊಂಡವರಿಗೂ 10 ಲಕ್ಷ ರೂ. ಪರಿಹಾರ ಘೋಷನೆ ಮಾಡಲಾಗಿದೆ. ಇನ್ನು ಕುಟುಂಬದ ಅರ್ಹ ಸದಸ್ಯರಿಗೆ ಕಾರ್ಖಾನೆಯಲ್ಲಿ ಉದ್ಯೋಗ ನೀಡಲಾಗುವುದು, ಗಾಯಗೊಂಡವರಿಗೆ ಚಿಕಿತ್ಸೆ ಹಾಗೂ ಮೃತ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡಲಾಗುವುದು ಎಂದಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !