Wednesday, February 28, 2024

ಛತ್ತೀಸ್‌ಗಢದ ನೂತನ ಮುಖ್ಯಮಂತ್ರಿಯಾಗಿ ವಿಷ್ಣು ದೇವ್ ಸಾಯಿ ಆಯ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಛತ್ತೀಸ್‌ಗಢದ ಮುಂದಿನ ಮುಖ್ಯಮಂತ್ರಿಯಾಗಿಬುಡಕಟ್ಟು ನಾಯಕ ಮತ್ತು ಮಾಜಿ ಕೇಂದ್ರ ಸಚಿವ ವಿಷ್ಣು ದೇವ್ ಸಾಯಿ ಅವರು ಆಯ್ಕೆಯಾಗಿದ್ದಾರೆ. ಈ ಕುರಿತು ಬಿಜೆಪಿ ಹೈಕಮಾಂಡ್‌ ಅಧಿಕೃತವಾಗಿ ಘೋಷಣೆ ಮಾಡಿದೆ.

ವಿಷ್ಣು ದೇವ ಸಾಯಿ ಛತ್ತೀಸ್‌ಗಢದ ಮೊದಲ ಬುಡಕಟ್ಟು ಮುಖ್ಯಮಂತ್ರಿಯಾಗಲಿದ್ದಾರೆ. ಸಾಯಿ ಅವರು 2020 ರಿಂದ 2022 ರವರೆಗೆ ಬಿಜೆಪಿಯ ರಾಜ್ಯಾಧ್ಯಕ್ಷರಾಗಿದ್ದರು. ಅವರು ಪ್ರಧಾನಿ ನರೇಂದ್ರ ಮೋದಿಯವರ ಮೊದಲ ಅವಧಿಯಲ್ಲಿಕೇಂದ್ರದ (ಉಕ್ಕು) ರಾಜ್ಯ ಸಚಿವರಾಗಿದ್ದರು. ಅವರು ಛತ್ತೀಸ್‌ಗಢದ ರಾಯ್‌ಪುರ ಕ್ಷೇತ್ರದಲ್ಲಿ ಬಿಜೆಪಿಯಿಂದ ಲೋಕಸಭಾ ಸದಸ್ಯರಾಗಿದ್ದರು. ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯರೂ ಆಗಿದ್ದಾರೆ. 2018 ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ, ಬಿಜೆಪಿ ತನ್ನ ಸಂಘಟನೆಯನ್ನು ಪುನರ್ರಚಿಸಿದಾಗ, ವಿಷ್ಣು ದೇವ್ ಸಾಯಿ ಅವರನ್ನು ಬಿಜೆಪಿಯ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಪ್ರಸ್ತುತ ಅವರು ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿದ್ದಾರೆ. 2022 ರಲ್ಲಿ, ಅರುಣ್ ಸಾವೊ ಅವರನ್ನು ಪಕ್ಷದ ರಾಜ್ಯ ಘಟಕದ ಮುಖ್ಯಸ್ಥರನ್ನಾಗಿ ಮಾಡಿದಾಗ ಈ ಹುದ್ದೆಯನ್ನು ತೊರೆದಿದ್ದರು.

ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯಲ್ಲಿ, ಸಾಯಿ ಕುಂಕುರಿ ಬುಡಕಟ್ಟು ಕ್ಷೇತ್ರದಿಂದ 25000 ಮತಗಳ ಅಂತರದಿಂದ ಗೆದ್ದಿದ್ದಾರೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!