ಛತ್ತೀಸ್ ಗಢದ ಮುಖ್ಯಮಂತ್ರಿಯಾಗಿ ವಿಷ್ಣು ದೇವ್ ಸಾಯಿ ಪ್ರಮಾಣ ವಚನ ಸ್ವೀಕಾರ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಛತ್ತೀಸ್ ಗಢದ ನೂತನ ಮುಖ್ಯಮಂತ್ರಿಯಾಗಿ ವಿಷ್ಣು ದೇವ್ ಸಾಯಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ,ಯುಪಿ ಸಿಎಂ ಯೋಗಿ ಆಧಿತ್ಯನಾಥ್ ಸಹಿತ ಹಿರಿಯ ಬಿಜೆಪಿ ನಾಯಕರು ಮತ್ತು ಇತರ ರಾಜ್ಯಗಳ ಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಛತ್ತೀಸ್ ಗಢ ಬಿಜೆಪಿ ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸಿದ್ದ ಮಾಜಿ ಕೇಂದ್ರ ಸಚಿವ ಬುಡಕಟ್ಟು ಮುಖಂಡ ಸಾಯಿ (59) ಅವರನ್ನು ಬಿಜೆಪಿ ಭಾನುವಾರ ಹೊಸ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿತ್ತು.

ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!