ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಾ.ವಿಷ್ಣುವರ್ಧನ್ ಸ್ಮಾರಕ ವಿಚಾರವಾಗಿ ಬುಧವಾರ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲಿದ್ದಾರೆ.
ಸಿಎಂ ಕಾವೇರಿ ನಿವಾಸದಲ್ಲಿ ಇಂದು 10:30ಕ್ಕೆ ಸಿಎಂ ಸಿದ್ದರಾಮಯ್ಯ ಅವರನ್ನು ಭಾರತಿ ವಿಷ್ಣುವರ್ಧನ್ ಹಾಗೂ ಅನಿರುದ್ಧ ಭೇಟಿಯಾಗಲಿದ್ದಾರೆ. ಈ ವೇಳೆ ಡಾ.ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕಾಗಿ ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ಕನಿಷ್ಠ 10 ಗುಂಟೆ ಜಮೀನನ್ನು ಮೀಸಲಿಡಬೇಕು ಹಾಗೂ ಅಭಿಮಾನಿಗಳು ಗೌರವ ಸಮರ್ಪಿಸಲು ಮೀಸಲಿಡುವಂತೆ ಮನವಿ ಮಾಡಲಿದ್ದಾರೆ.
ವಿಷ್ಣು ಸ್ಮಾರಕ ವಿಚಾರ: ಇಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಲಿದ್ದಾರೆ ಭಾರತಿ
