Saturday, April 1, 2023

Latest Posts

ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಆಗುತ್ತಿರುವುದು ಮನಸ್ಸಿಗೆ ಖುಷಿ ನೀಡಿದೆ: ಶಿವರಾಜ್​ಕುಮಾರ್​ ಟ್ವೀಟ್​

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ವಿಷ್ಣುವರ್ಧನ್​ ಅವರ ಸ್ಮಾರಕ ಲೋಕಾರ್ಪಣೆ ಆಗಿರುವುದು ವಿಷ್ಣು ಅಭಿಮಾನಿಗಳಿಗೆ ಮಾತ್ರವಲ್ಲದೇ ಇಡೀ ಚಂದನವನಕ್ಕೆ ಖುಷಿ ನೀಡಿದೆ. ಶಿವರಾಜ್​ಕುಮಾರ್​, ಕಿಚ್ಚ ಸುದೀಪ್​ ಮುಂತಾದವರು ಈ ಬಗ್ಗೆ ಟ್ವೀಟ್​ ಮಾಡಿದ್ದಾರೆ.

ನಟ ಶಿವರಾಜ್​ಕುಮಾರ್​ ತಮ್ಮ ಮಾತುಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ’13 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಮೈಸೂರಿನಲ್ಲಿ ನಮ್ಮ ಪ್ರೀತಿಯ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಸ್ಮಾರಕ ಲೋಕಾರ್ಪಣೆ ಆಗುತ್ತಿರುವುದು ಮನಸ್ಸಿಗೆ ಖುಷಿ ನೀಡಿದೆ! ಸ್ಮಾರಕ ನಿರ್ಮಾಣಕ್ಕೆ ಕಾರಣರಾದ ವಿಷ್ಣು ಕುಟುಂಬಕ್ಕೆ, ಸರ್ಕಾರಕ್ಕೆ ಹಾಗೂ ಅಭಿಮಾನಿಗಳಿಗೆ ನನ್ನ ಧನ್ಯವಾದಗಳು’ ಎಂದು ಶಿವರಾಜ್​ಕುಮಾರ್​ ಅವರು ಟ್ವೀಟ್​ ಮಾಡಿದ್ದಾರೆ.

ವಿಷ್ಣುವರ್ಧನ್ ನಮ್ಮ ತಂದೆ ಡಾ. ರಾಜ್ ಅವರನ್ನು ಬಹಳಷ್ಟು ಪ್ರೀತಿ, ಗೌರವ, ಅಭಿಮಾನದಿಂದ ಕಾಣುತ್ತಿದ್ದರು. ಅಪ್ಪಾಜಿ ಹಾಗೂ ನಮ್ಮ ಕುಟುಂಬ ಕೂಡ ವಿಷ್ಣು ಅವರನ್ನು ತುಂಬು ಪ್ರೀತಿಯಿಂದ ಕಂಡಿದ್ದೇವೆ. ವಿಷ್ಣುವರ್ಧನ್ ಅವರ ಅಭಿಮಾನಿಗಳ ಕೋರಿಕೆ ಕೊನೆಗೂ ಸ್ಮಾರಕ ರೂಪದಲ್ಲಿ ಈಡೇರುತ್ತಿರುವುದು ನನಗೆ ಹಾಗೂ ನಮ್ಮ ಚಿತ್ರರಂಗಕ್ಕೆ ಬಹಳ ಹೆಮ್ಮೆಯ ವಿಷಯ ಎಂದು ಶಿವಣ್ಣ ಪೋಸ್ಟ್​ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!