spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, September 28, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ವಿಶ್ವೇಶ್ವರಯ್ಯನವರ ಬದ್ಧತೆ – ಸಮಯಪ್ರಜ್ಞೆ ಮೈಗೂಡಿಸಿಕೊಳ್ಳಲು ಯುವಜನರಿಗೆ ಕರೆ

- Advertisement -Nitte

ಹೊಸ ದಿಗಂತ ವರದಿ, ಮಂಡ್ಯ :

ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯನವರ ಬದ್ಧತೆ ಮತ್ತು ಸಮಯಪ್ರಜ್ಞೆಯನ್ನು ಇಂದಿನ ಯುವಜನರು ಮೈಗೂಡಿಸಿಕೊಳ್ಳಬೇಕಿದೆ ಎಂದು ಜಿಲ್ಲಾ ಬ್ರಾಹ್ಮಣ ಸಮಾಜದ ಕಾರ‌್ಯದರ್ಶಿ ಶಂಕರನಾರಾಯಣಶಾಸ್ತ್ರೀ ತಿಳಿಸಿದರು.
ಜಿಲ್ಲಾ ಬ್ರಾಹ್ಮಣ ಸಭಾ ವತಿಯಿಂದ ನಗರದ ಕಾವೇರಿ ವನದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿರುವ ಸರ್ ಎಂ.ವಿ. ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ವಿಶ್ವೇಶ್ವರಯ್ಯ ಅವರ ಸೇವೆಯನ್ನು ಯಾರೂ ಮರೆಯುವಂತಿಲ್ಲಘಿ. ಅದರಲ್ಲೂ ಮಂಡ್ಯ ಜಿಲ್ಲೆಯ ಜನ ಅವರಿಗೆ ಎಂದೆಂದಿಗೂ ಋಣಿಯಾಗಿರಬೇಕು ಎಂದರು.
ಪ್ರಸ್ತುತ ದಿನಗಳಲ್ಲಿ ತಾಂತ್ರಿಕತೆ ಬಹಳ ಮುಂದುವರಿದೆ. ವಿಶ್ವೇಶ್ವರಯ್ಯನವರ ಕಾಲದಲ್ಲಿದ್ದ ತಾಂತ್ರಿಕತೆಗಿಂತಲೂ ಈಗ ಸಾವಿರ ಪಟ್ಟು ಹೆಚ್ಚಾಗಿದೆ. ಇಂದಿನ ಯುವಜನತೆ ಅವರಿಗಿಂತಲೂ ಹೆಚ್ಚು ಶಕ್ತರಾಗಿದ್ದಾರೆ. ಆದರೆ ಅವರಂತೆ ಬದ್ಧತೆ ಮತ್ತು ಸಮಯಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾಲ ಕಾಲಕ್ಕೆ ತಕ್ಕಂತೆ ತಾಂತ್ರಿಕತೆಯನ್ನು ಸದ್ಬಳೆಕ ಮಾಡಿಕೊಂಡು ದೇಶವನ್ನು ಬಲಿಷ್ಠ ಮತ್ತು ಅಭಿವೃದ್ಧಿಯತ್ತ ಕೊಂಡೊಯ್ಯುವ ಜವಾಬ್ದಾರಿ ಯುವಜನರ ಮೇಲಿದೆ ಎಂದು ಹೇಳಿದರು.
ಬ್ರಾಹ್ಮಣ ಸಭಾ ಅಧ್ಯಕ್ಷ ಸದಾಶಿವಭಟ್, ಎಸ್. ಮುರುಳಿ, ಡಾ. ಬಿ.ಎಸ್. ಶಿವಕುಮಾರ್, ಬಿ.ಜಿ. ಉಮಾ, ನರಸಿಂಹಮೂರ್ತಿ ಸೇರಿದಂತೆ ಹಲವರು ಇದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss