ಮಾರ್ಚ್ ತಿಂಗಳ ಬಳಿಕ ಅಯೋಧ್ಯೆಗೆ ಭೇಟಿ ನೀಡಿ: ಸಚಿವ ಸಂಪುಟ ಸದಸ್ಯರಿಗೆ ಪ್ರಧಾನಿ ಮೋದಿ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ಲೋಕಾರ್ಪಣೆಗೊಂಡಿದೆ. ಭಕ್ತರು ಆಯೋಧ್ಯೆಗೆ ಧಾವಿಸಿದ್ದಾರೆ. ಹೀಗಾಗಿ ನೂಕು ನುಗ್ಗಲು ಸೃಷ್ಟಿಯಾಗಿದೆ.

ಇತ್ತ ಅಪಾರ ಸಂಖ್ಯೆಯಲ್ಲಿ ಭಕ್ತರು ಆಯೋಧ್ಯೆಗೆ ಆಗಮಿಸುತ್ತಿರುವ ಕಾರಣ ಮಾರ್ಚ್ ವರೆಗೆ ಸಚಿವ ಸಂಪುಟದ ಸದಸ್ಯರು ಆಯೋಧ್ಯೆಗೆ ಭೇಟಿ ನೀಡದಂತೆ ಪ್ರಧಾನಿ ಮೋದಿ ಸೂಚಿಸಿದ್ದಾರೆ.

ಸಚಿವರ ಭೇಟಿಯಿಂದ ಭಕ್ತರಿಗೆ ಅನಾನುಕೂಲಗಳಾಗಲಿವೆ. ಹೀಗಾಗಿ ಮಾರ್ಚ್ ತಿಂಗಳ ಬಳಿಕ ಭೇಟಿ ನೀಡಿ ದರ್ಶನ ಪಡೆಯಲು ಮೋದಿ ಸೂಚಿಸಿದ್ದಾರೆ.

ದೆಹಲಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ವಿಚಾರಗಳನ್ನು ಚರ್ಚಿಸಲಾಗಿದೆ. ಈ ವೇಳೆ ಪ್ರಧಾನಿ ಮೋದಿ ಸಚಿವ ಸಂಪುಟ ಸದಸ್ಯರಿಗೆ ಈ ಸೂಚನೆ ನೀಡಿದ್ದಾರೆ. ಆಯೋಧ್ಯೆಯಲ್ಲಿ ಸದ್ಯ ವಿಪರೀತ ಜನದಟ್ಟಣೆ ಇದೆ. ಇದೇ ಸಂದರ್ಭದಲ್ಲಿ ಸಚಿವರು ಆಯೋಧ್ಯೆಗೆ ಭೇಟಿ ನೀಡಿದರೆ ಗಣ್ಯರ ಪ್ರೊಟೋಕಾಲ್ ಅಡಿಯಲ್ಲಿ ಭೇಟಿಗೆ ಅವಕಾಶ ನೀಡಲಾಗುತ್ತದೆ. ಇದರಿಂದ ಅಪಾರ ಸಂಖ್ಯೆಯಲ್ಲಿ ಆಗಮಿಸಿರುವ ಭಕ್ತರಿಗೆ ಸಮಸ್ಯೆಯಾಗಲಿದೆ. ಹೀಗಾಗಿ ಮಾರ್ಚ್ ವರೆಗೆ ಸಚಿವರು ಆಯೋಧ್ಯೆ ಭೇಟಿ ಮಾಡದಂತೆ ಮೋದಿ ಸೂಚಿಸಿದ್ದಾರೆ.

ಜನವರಿ ಹಾಗೂ ಫೆಬ್ರವರಿಯಲ್ಲಿ ಭಕ್ತರ ಸಂಖ್ಯೆ ಹೆಚ್ಚಿರಲಿದೆ. ಮಾರ್ಚ್ ತಿಂಗಳಲ್ಲಿ ಸಚಿವರು ಆಯೋಧ್ಯೆ ಭೇಟಿಗೆ ಪ್ಲಾನ್ ಮಾಡಿಕೊಳ್ಳಬಹುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಜನಸಾಮಾನ್ಯ ಭಕ್ತರ ದರ್ಶನಕ್ಕೆ ಅಡ್ಡಿಯಾಗುವುದನ್ನು ತಪ್ಪಿಸಲು ಮೋದಿ ಸಲಹೆಯನ್ನು ಸಚಿವರು ಒಪ್ಪಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!