ವಿಜಯಪುರ| ಜಿಲ್ಲೆಯ ಗಡಿಗಳಲ್ಲಿನ ಚೆಕ್ ಪೋಸ್ಟ್‌‌ಗಳಿಗೆ ಭೇಟಿ ನೀಡುವೆ: ಸಚಿವೆ ಶಶಿಕಲಾ ಜೊಲ್ಲೆ

ಹೊಸದಿಗಂತ ವರದಿ, ವಿಜಯಪುರ:

ಕೋವಿಡ್ ಉಲ್ಬಣ ಹಿನ್ನೆಲೆ ಜಿಲ್ಲೆಯ ಗಡಿ ಭಾಗದಲ್ಲಿ ನಿರ್ಮಿಸಿರುವ ಚೆಕ್ ಪೋಸ್ಟ್‌‌ಗಳಿಗೆ ಭೇಟಿ ನೀಡಿ, ಪರಿಶೀಲಿಸುವೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲಾದ್ಯಂತದ 11 ಚೆಕ್ ಪೋಸ್ಟ್‌ನಲ್ಲಿ ಜಿಲ್ಲಾ ಪೊಲೀಸ್ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೂ, ಲೋಪಗಳು ಆಗದಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ. ಏನಾದರೂ ಸಮಸ್ಯೆಗಳಿದ್ದರೆ ತಕ್ಷಣವೇ ಕ್ರಮ ತೆಗೆದುಕೊಳ್ಳುತ್ತೇನೆ ಎಂದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!