ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಶ್ಮೀರಿ ಪಂಡಿತರ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ.ಬಾಕ್ಸ್ ಆಫೀಸ್ನಲ್ಲಿ 250 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಮಾಡಿದ್ದು,ಇದೀಗ ಆಸ್ಕರ್ ಅಂಗಳದಲ್ಲಿ ಸದ್ದು ಮಾಡುತ್ತಿದೆ.
ಈ ಸುದ್ದಿಯನ್ನು ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ. ಈ ಸಿನಿಮಾದಲ್ಲಿ ಪಲ್ಲವಿ ಜೋಶಿ, ಅನುಪಮ್ ಖೇರ್, ದರ್ಶನ್ ಕುಮಾರ್, ಮಿಥುನ್ ಚಕ್ರವರ್ತಿ ಮುಂತಾದವರು ನಟಿಸಿದ್ದಾರೆ.
ಇದೀಗ ‘ದಿ ಕಾಶ್ಮೀರ್ ಫೈಲ್ಸ್’ ಮಾತ್ರವಲ್ಲದೇ ಕನ್ನಡದ ‘ಕಾಂತಾರ’, ‘ವಿಕ್ರಾಂತ್ ರೋಣ’ ಸಿನಿಮಾಗಳು ಕೂಡ ಈ ಶಾರ್ಟ್ಲಿಸ್ಟ್ನಲ್ಲಿ ಸ್ಥಾನ ಪಡೆದುಕೊಂಡಿವೆ.
‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವು ಆಸ್ಕರ್ನ ‘ವಿದೇಶಿ ಭಾಷಾ ಚಿತ್ರ’ ವಿಭಾಗಕ್ಕೆ ಸ್ಪರ್ಧೆ ನೀಡಲು ಭಾರತದಿಂದ ಅಧಿಕೃತವಾಗಿ ಆಯ್ಕೆ ಆಗಬಹುದು ಎಂದು ಬಹುತೇಕರು ಭಾವಿಸಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ. ಫಿಲ್ಮ್ ಫೆಡರೇಷನ್ ಆಫ್ ಇಂಡಿಯಾದಿಂದ ಗುಜರಾತಿ ಭಾಷೆಯ ‘ಚೆಲ್ಲೋ ಶೋ’ ಸಿನಿಮಾ ಆಯ್ಕೆ ಆಗಿದ್ದರಿಂದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗೆ ಅವಕಾಶ ಮಿಸ್ ಆಗಿತ್ತು. ಆದರೆ ಈ ಚಿತ್ರ ಈಗ ನೇರವಾಗಿ ಆಸ್ಕರ್ ಕಣದಲ್ಲಿ ಸ್ಪರ್ಧೆ ಮಾಡುತ್ತಿದೆ.
ಮ್ಮ ಸಿನಿಮಾ ಜೊತೆ ಪಟ್ಟಿಯಲ್ಲಿ ಇರುವ ಇತರೆ ಚಿತ್ರಗಳಿಗೂ ಅವರು ಶುಭ ಹಾರೈಸಿದ್ದಾರೆ. ಕನ್ನಡದ ‘ಕಾಂತಾರ’, ‘ವಿಕ್ರಾಂತ್ ರೋಣ’ ಸಿನಿಮಾ ತಂಡಗಳು ಕೂಡ ಖುಷಿ ಸುದ್ದಿಯನ್ನು ಹಂಚಿಕೊಂಡಿವೆ.