ಹೊಸದಿಗಂತ ಆನ್ಲೈನ್ ಡೆಸ್ಕ್:
ಹೆಲ್ಮೆಟ್ ಧರಿಸದೇ ಪತ್ನಿಯನ್ನು ಕೂರಿಸಿಕೊಂಡು ಬೈಕ್ ಓಡಿಸಿದ ವಿಡಿಯೋವನ್ನು ನಟ ವಿವೇಕ್ ಒಬೆರಾಯ್ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ ಪೇಚಿಗೆ ಸಿಲುಕಿದ್ದಾರೆ.
ವಿಡಿಯೋ ಶೇರ್ ಆಗುತ್ತಿದ್ದಂತೆಯೇ ಮುಂಬೈ ಪೊಲೀಸರು ವಿವೇಕ್ಗೆ ನೋಟಿಸ್ ನೀಡಿದ್ದಾರೆ.
ಹೆಲ್ಮೆಟ್ ಇಲ್ಲದೆ ಬೈಕ್ ಸವಾರಿ ಮಾಡುತ್ತಿರುವ ಬಗ್ಗೆ ಟ್ವಿಟ್ಟರ್ನಲ್ಲಿ ದೂರು ಬಂದಿದ್ದು, ಸಂಚಾರ ನಿಯಮ ಉಲ್ಲಂಘಿಸಿದ್ದಕ್ಕಾಗಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ವಿವೇಕ್ ಒಬೆರಾಯ್ ಅವರೇ ಫೆಬ್ರವರಿ 14 ರ ಪ್ರೇಮಿಗಳ ದಿನದಂದು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿದ್ದು, ಇದರಲ್ಲಿ ಅವರು ಹೆಲ್ಮೆಟ್ ಇಲ್ಲದೆ ಪತ್ನಿಯೊಂದಿಗೆ ಬೈಕ್ ಸವಾರಿ ಮಾಡಿದ್ದಾರೆ. ಈ ಕಾರಣಕ್ಕೆ ನಟನ ವಿರುದ್ಧ ಐಪಿಸಿ ಸೆಕ್ಷನ್ 188, 269, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 129, 177 ಅಡಿ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.