ವಿವೋ ಪ್ರೊ ಕಬಡ್ಡಿ 9ನೇ ಋತುವಿನ ವೇಳಾಪಟ್ಟಿ ಪ್ರಕಟ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ವಿವೋ ಪ್ರೊ ಕಬಡ್ಡಿ ಲೀಗ್‌ನ 9ನೇ ಆವೃತ್ತಿಯ ಮೊದಲಾರ್ಧದ ವೇಳಾಪಟ್ಟಿ ಪ್ರಕಟಗೊಂಡಿದ್ದು, ಅಕ್ಟೋಬರ್‌ 7ರಂದು ಸಿಲಿಕಾನ್ ಸಿಟಿಯ ಕಂಠೀರವ ಕ್ರೀಡಾಂಗಣದಲ್ಲಿ ಲೀಗ್‌ ಆರಂಭಗೊಳ್ಳಲಿದೆ ಎಂದು ಆಯೋಜಕರಾದ ಮಾರ್ಷಲ್ ಸ್ಪೋರ್ಟ್ಸ್ ಹೇಳಿದೆ.

ಅಕ್ಟೋಬರ್‌ 28ರಿಂದ ಪುಣೆಯ ಶ್ರೀ ಶಿವಛತ್ರಪತಿ ಸ್ಪೋರ್ಟ್ಸ್‌ ಕಾಂಪ್ಲೆಕ್ಸ್‌ (ಬ್ಯಾಡ್ಮಿಂಟನ್‌ ಕೋರ್ಟ್‌) ನಂತರದ ಹಂತ ನಡೆಯಲಿದೆ. ಈ ಋತುವಿನ ಲೀಗ್‌ನಲ್ಲಿ ಕಬಡ್ಡಿ ಅಭಿಮಾನಿಗಳಿಗೆ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ನೋಡುವ ಅವಕಾಶವಿದೆ ಎಂದು ತಿಳಿಸಿದೆ.
66 ಪಂದ್ಯಗಳ ವೇಳಾಪಟ್ಟಿಯಲ್ಲಿ ಪ್ರತಿಯೊಂದು ಪಂದ್ಯ ವಿಭಿನ್ನವಾಗಿರಲಿದ್ದು, ಮೊದಲ 2 ದಿನಗಳೊಳಗೆ ಕಬಡ್ಡಿ ಅಭಿಮಾನಿಗಳು ಎಲ್ಲ 12 ತಂಡಗಳ ಆಟವನ್ನು ವೀಕ್ಷಿಸಬಹುದಾಗಿದೆ. ಪಿಕೆಎಲ್‌ 9ನೇ ಋತುವಿನಲ್ಲಿ ಲೀಗ್‌ ಹಂತದಲ್ಲಿ ಪ್ರತಿ ಶುಕ್ರವಾರ ಮತ್ತು ಭಾನುವಾರ ಕಬಡ್ಡಿ ಅಭಿಮಾನಿಗಳು ಮೂರು ಪಂದ್ಯಗಳ ಸಂಭ್ರಮ ಸವಿಯಬಹುದು ಎಂದು ಮಾಹಿತಿ ನೀಡಿದೆ.

ದಬಾಂಗ್‌ ಡೆಲ್ಲಿ – ಯು ಮುಂಬಾ ಮುಖಾಮುಖಿ:
ಅಕ್ಟೋಬರ್‌ 7ರಂದು ನಡೆಯುವ 9ನೇ ಋತುವಿನ ಮೊದಲ ಪಂದ್ಯದಲ್ಲಿ 8ನೇ ಋತುವಿನ ಚಾಂಪಿಯನ್‌ ದಬಾಂಗ್‌ ಡೆಲ್ಲಿ ತಂಡವು ಯು-ಮುಂಬಾ ವಿರುದ್ಧ ಸೆಣಸಲಿದೆ. ನಂತರ ನಡೆಯುವ ಪಂದ್ಯದಲ್ಲಿ ಬೆಂಗಳೂರು ಬುಲ್ಸ್‌ ಮತ್ತು ತೆಲುಗು ಟೈಟಾನ್ಸ್‌ ತಂಡಗಳು ಮುಖಾಮುಖಿಯಾಗಲಿವೆ. ಆರಂಭಿಕ ದಿನದ ಕೊನೆಯ ಪಂದ್ಯದಲ್ಲಿ ಜೈಪುರ ಪಿಂಕ್‌ ಪ್ಯಾಂಥರ್ಸ್‌ ತಂಡ ಯುಪಿ ಯೋಧಾಸ್‌ ವಿರುದ್ಧ ಹೋರಾಟ ನಡೆಸಲಿದೆ ಎಂದಿದೆ.

ಎರಡನೇ ಹಂತದ ಲೀಗ್ ವೇಳಾಪಟ್ಟಿ

ಎರಡನೇಯ ಹಂತದಲ್ಲಿ ತಂಡಗಳು ತಮ್ಮ ರಣತಂತ್ರ ರೂಪಿಸಲು, ತಮ್ಮ ಸಾಮರ್ಥ್ಯ ಉತ್ತಮಪಡಿಸಿಕೊಳ್ಳುಲು ಅವಕಾಶ ನೀಡುವ ದೃಷ್ಟಿಯಿಂದ ಲೀಗ್‌ನ ಎರಡನೇ ಹಂತದ ವೇಳಾಪಟ್ಟಿಯನ್ನು 2022ರ ಅಕ್ಟೋಬರ್‌ ತಿಂಗಳ ಕೊನೆಯ ವಾರದಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!