ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾತಿಗಣತಿ ಹಿನ್ನೆಲೆಯಲ್ಲಿ ಒಕ್ಕಲಿಗ ಸಮುದಾಯದ ಮಹತ್ವದ ಸಭೆ ನಡೆಯಿತು.
ಆದಿಚುಂಚನಗಿರಿ ಮಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಕೈಗಾರಿಕೆ ಸಚಿವ ಕುಮಾರಸ್ವಾಮಿ, ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸದಾನಂದ ಗೌಡ, ಹಾಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯದ ಒಕ್ಕಲಿಗ ಸಮುದಾಯದ ಸಚಿವರು, ಒಕ್ಕಲಿಗ ಸಮುದಾಯದ ಲೋಕಸಭಾ ಸದಸ್ಯರು, ಶಾಸಕರು, ಮಾಜಿ ಶಾಸಕರು ಹಾಗೂ ಒಕ್ಕಲಿಗ ಸಂಘದ ಪದಾಧಿಕಾರಿಗಳು ಭಾಗಿಯಾಗಿದ್ದರು.
ಈ ಸಭೆಯಲ್ಲಿ ಸಮೀಕ್ಷೆಯ ವೇಳೆ ಒಕ್ಕಲಿಗ ಸಮುದಾಯಕ್ಕೆ ಸಮೀಕ್ಷೆಯಲ್ಲಿ ಏನೇನು ಬರೆಸಬೇಕು, ಯಾವ ಮಾಹಿತಿ ನೀಡಬೇಕು, ಒಕ್ಕಲಿಗ ಸಮುದಾಯದ ಜನಸಂಖ್ಯೆ ಕಡಿಮೆಯಾಗದಂತೆ ನೋಡಿಕೊಳ್ಳಲು ಏನು ಕ್ರಮ ಕೈಗೊಳ್ಳಬೇಕು, ಸಮೀಕ್ಷೆಯ ಬಗ್ಗೆ ಜಾಗೃತಿ ಮೂಡಿಸಲು ಏನೇನು ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗಿದೆ.