ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಂದೆಡೆ ಭರ್ಜರಿ ಕುತೂಹಲ, ಇನ್ನೊಂದೆಡೆ ಭಾರೀ ಬಿಗಿ ಭದ್ರತೆ ನಡುವೆ ಐದು ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶದ ಮತ ಎಣಿಕೆ ಆರಂಭವಾಗಿದ್ದು, ಮತದಾರ ಬರೆದಿರುವ ಅಭ್ಯರ್ಥಿಗಳ ಭವಿಷ್ಯ ಕೆಲವೇ ಗಂಟೆಗಳಲ್ಲಿ ಬಹಿರಂಗವಾಗಲಿದೆ.
ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢ ವಿಧಾನಸಭೆ ಚುನಾವಣಾ ಫಲಿತಾಂಶ ಇಂದು ಹೊರ ಬೀಳಲಿದ್ದು, ಮಿಜೋರಾಂ ರಾಜ್ಯದಲ್ಲಿ ನಾಳೆ ಮತಗಳ ಎಣಿಕೆಯಾಗಲಿದೆ.