Thursday, November 6, 2025

ಮೊದಲು ಮತ ಚಲಾಯಿಸಿ, ನಂತರ ಉಪಹಾರ ಸೇವಿಸಿ: ಪ್ರಧಾನಿ ಮೋದಿ ಕರೆ

ಹೊಸದಿಗಂತ ಡಿಜಿಟಲ ಡೆಸ್ಕ್‌:

ಬೂತ್‌ ಮಟ್ಟದಲ್ಲಿ ಶ್ರದ್ಧೆಯಿಂದ ಕೆಲಸ ಮಾಡಿದ ಬಿಹಾರದ ಬಿಜೆಪಿ ಮಹಿಳಾ ಕಾರ್ಯಕರ್ತರನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಅವರನ್ನುದ್ದೇಶಿಸಿ, ‘ಮೊದಲು ಮತ ಚಲಾಯಿಸಿ, ನಂತರ ಉಪಹಾರ ಸೇವಿಸಿ ಇದರಿಂದ, ಮತದಾನ ಪ್ರಮಾಣ ಉತ್ತಮವಾಗಿರುತ್ತದೆ ಎಂದು ಕರೆ ನೀಡಿದ್ದಾರೆ.

ಮಹಿಳಾ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ ಪ್ರಧಾನಿ, ಪಕ್ಷದ ಕಾರ್ಯಕರ್ತರು ಮಹಿಳಾ ಮತದಾರರನ್ನು ಸಜ್ಜುಗೊಳಿಸಬೇಕು ಮತ್ತು ರಾಜ್ಯಾದ್ಯಂತ ಮತದಾರರ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ತಿಳಿಸಿದ್ದಾರೆ.

243 ಕ್ಷೇತ್ರಗಳಿರುವ ಬಿಹಾರದಲ್ಲಿ ಎರಡು ಹಂತಗಳಲ್ಲಿ ಮತದಾನಕ್ಕೆ ದಿನಾಂಕ ನಿಗದಿಯಾಗಿದೆ. 121 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ನಾಳೆ (ನವೆಂಬರ್‌ 6ರಂದು) ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತೆಯರನ್ನುದ್ದೇಶಿಸಿ ವರ್ಚುವಲ್‌ ಆಗಿ ಮಾತನಾಡಿದರು.

‘ಎನ್‌ಡಿಎ ಮೈತ್ರಿಕೂಟವು ಭಾರಿ ಬಹುಮತದಿಂದ ಗೆದ್ದು ಮತ್ತೊಮ್ಮೆ ಅಧಿಕಾರಕ್ಕೇರಲಿದೆ ಎಂದು ವಿಶ್ವಾಸದಿಂದ ಹೇಳುತ್ತೇನೆ. ಬಿಹಾರದ ಜನರು ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಮತ ಚಲಾಯಿಸುವ, ಕಳೆದ 20 ವರ್ಷಗಳ ದಾಖಲೆಯನ್ನು ಮುರಿಯಲಿದ್ದಾರೆ. ‘ಜಂಗಲ್‌ ರಾಜ್‌’ಗೆ ಸೇರಿದವರು ಅತಿ ದೊಡ್ಡ ಸೋಲನ್ನು ಅನುಭವಿಸಲಿದ್ದಾರೆ’ ಎಂದು ಹೇಳಿದ್ದಾರೆ.

error: Content is protected !!