ಹೊಸದಿಗಂತ ಡಿಜಿಟಲ್ ಡೆಸ್ಕ್:
ಹುಬ್ಬಳ್ಳಿಯ ಕಾಲೇಜು ಕ್ಯಾಂಪಸ್ನಲ್ಲಿ ಭೀಕರವಾಗಿ ಕೊಲೆಯಾದ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಪೋಷಕರು ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ಗೆ ಮತ ನೀಡಿ ಎಂದು ಕೇಳಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಿರೇಮಠ ನಿವಾಸಕ್ಕೆ ಭೇಟಿ ನೀಡಿ ಕಷ್ಟದ ಸಮಯದಲ್ಲಿ ಕುಟುಂಬಕ್ಕೆ ಬೇಕಾದ ಎಲ್ಲಾ ರೀತಿಯ ಬೆಂಬಲ ನೀಡಿದಕ್ಕಾಗಿ ಕೃತಜ್ಞತೆ ಸಲ್ಲಿಸಿದ್ದಾರೆ. ಜೊತೆಗೆ ಮೃಣಾಲ್ ಅವರಿಗೆ ವೋಟ್ ಮಾಡಿ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪುತ್ರಿ ಹತ್ಯೆಯಾದ ನಂತರ ಬೆಂಬಲ ವ್ಯಕ್ತಪಡಿಸಲು ಮನೆಗೆ ಬಂದಿದ್ದು, ಸಮಗ್ರ ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದಾರೆ. ಹಂತಕರಿಗೂ ಕಠಿಣ ಶಿಕ್ಷೆಯಾಗುವಂತೆ ಸರ್ಕಾರ ನೋಡಿಕೊಳ್ಳಲಿದೆ ಎಂದು ಸಿಎಂ ಹೇಳಿದ್ದಾರೆ.