ನಮ್ಮ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವದಿಸಿದ ಜನತೆಗೆ ಪ್ರೀತಿಪೂರ್ವಕ ಧನ್ಯವಾದ: ಸಿಎಂ ಸಿದ್ದು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉಪಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ವಿಜಯೋತ್ಸವ ಆಚರಣೆ ಕುರಿತು ಪ್ರತಿಕ್ರಿಯಿಸಿದ್ದಾರೆ.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಚಲಾಯಿಸಿದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಈ ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಜಯ ದಾಖಲಿಸಿ, ವಿಧಾನಸಭೆಗೆ ಪ್ರವೇಶಿಸಿರುವ ನಮ್ಮ ಅಭ್ಯರ್ಥಿಗಳಾದ ಯಾಸಿರ್ ಅಹ್ಮದ್ ಖಾನ್ ಪಠಾಣ್, ಅನ್ನಪೂರ್ಣ ತುಕಾರಾಮ್ ಹಾಗೂ ಸಿ.ಪಿ.ಯೋಗೇಶ್ವರ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!