ದೇಶದ ಅಭಿವೃದ್ಧಿಗಾಗಿ ಡಬ್ಬಲ್ ಇಂಜಿನ್ ಸರಕಾರಕ್ಕೆ ಮತ ಹಾಕಿ: ಸಿದ್ದಾಪುರದಲ್ಲಿ ಅಮಿತ್ ಶಾ ಕರೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ಸಿದ್ದಾಪುರದಲ್ಲಿ ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರಿಂದ ಬೃಹತ್ ರೋಡ್ ಶೋ ಶನಿವಾರ ಸಂಜೆ ನಡೆಯಿತು.

ಪೇಟೆಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು, ಅಭಿವೃದ್ಧಿ ಪರ ಆಡಳಿತ ಬೇಕಾದರೆ ಡಬ್ಬಲ್ ಇಂಜಿನ್‍ನ ಬಿಜೆಪಿ ಸರಕಾರ ಬೇಕು. ಅವನತಿಯತ್ತ ಸಾಗುತ್ತಿರುವ ಕಾಂಗ್ರೆಸ್ ವಿರುದ್ಧ ಜನಾಕ್ರೋಶ ಭುಗಿಲೆದ್ದಿದೆ. ಕರ್ನಾಟಕದಲ್ಲಿ ಸುರಕ್ಷ ಸರಕಾರಕ್ಕಾಗಿ ಬಿಜೆಪಿಗೆ ಮತಹಾಕಿ. ಸುರಕ್ಷ ಸರಕಾರಕ್ಕಾಗಿ ಬೈಂದೂರು ಕ್ಷೇತ್ರದ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಅವರನ್ನು 50ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲ್ಲಿಸಿಕೊಂಡಬೇಕು ಎಂದು ಹೇಳಿದರು.

ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ , ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯ ಪ್ರತಾಪ್‍ಸಿಂಹ ನಾಯಕ್, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುರೇಶ ನಾಯಕ್ ಕುಯಿಲಾಡಿ, ಬೈಂದೂರು ಮಂಡಲದ ಅಧ್ಯಕ್ಷ ದೀಪಕ್‍ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ಕಮಲೇಶ್ ಬೆಸ್ಕೂರು, ಬೈಂದೂರು ಬಿಜೆಪಿ ಉಸ್ತುವಾರಿ ಬ್ರಿಜೇಶ್ ಚೌಟ ಮತ್ತು ವಿವಿಧ ಘಟಕಗಳ ಮುಖಂಡರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!