ನಾಳೆ ಲೋಕಸಭೆಯ ನೂತನ ಸ್ಪೀಕರ್ ಆಯ್ಕೆಗೆ ವೋಟ್: ಸಂಸದರಿಗೆ ವಿಪ್‌ ಜಾರಿ ಮಾಡಿದ ಕಾಂಗ್ರೆಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಲೋಕಸಭೆಯ ನೂತನ ಸ್ಪೀಕರ್ ಆಯ್ಕೆಗೆ ನಾಳೆ (ಬುಧವಾರ) ಮತದಾನ ನಡೆಯಲಿದ್ದು, ಹೀಗಾಗಿ ತಪ್ಪದೆ ಪಾಲ್ಗೊಳ್ಳುವಂತೆ ಪಕ್ಷದ ಎಲ್ಲಾ ಸಂಸದರಿಗೆ ಕಾಂಗ್ರೆಸ್ ವಿಪ್‌ ಜಾರಿ ಮಾಡಿದೆ.

ಜೂ.26ರಂದು ಲೋಕಸಭಾ ಸ್ಪೀಕರ್‌ ಆಯ್ಕೆಗೆ ಚುನಾವಣೆ ನಡೆಯಲಿದ್ದು, 27ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಲೋಕಸಭೆ ಸ್ಪೀಕರ್‌ ಸ್ಥಾನಕ್ಕೆ ಎನ್‌ಡಿಎ ತನ್ನ ಅಭ್ಯರ್ಥಿಯಾಗಿ ಬಿಜೆಪಿಯ ಓಂ ಬಿರ್ಲಾ ಅವರನ್ನು ಕಣಕ್ಕಿಳಿಸಿದೆ. ‘I.N.D.I.A’ ಮೈತ್ರಿಕೂಟವು ಕೇರಳದ ಕಾಂಗ್ರೆಸ್‌ ಸಂಸದ ಕೋಡಿಕುನ್ನಿಲ್‌ ಸುರೇಶ್ ಅವರನ್ನು ಕಣಕ್ಕಿಳಿಸಿದೆ.

ಲೋಕಸಭೆ ಸಭಾಧ್ಯಕ್ಷರ ಆಯ್ಕೆ ವಿಚಾರದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಮಾತುಕತೆ ಮುರಿದುಬಿದ್ದ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ರಾಜಸ್ಥಾನದ ಕೋಟಾ ಲೋಕಸಭಾ ಕ್ಷೇತ್ರದಿಂದ 3ನೇ ಬಾರಿಗೆ ಲೋಕಸಭಾ ಸದಸ್ಯರಾಗಿ ಬಿರ್ಲಾ ಆಯ್ಕೆಯಾಗಿದ್ದಾರೆ. ಇತ್ತ ಕೋಡಿಕುನ್ನಿಲ್‌ ಸುರೇಶ್ ಅವರು ಕೇರಳದಿಂದ 7ನೇ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!