ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಗಸ್ಟ್ 5 ರಂದು ಬೆಂಗಳೂರಲ್ಲಿ ರಾಹುಲ್ ಗಾಂಧಿ ಆಗಮನವಾಗಲಿದೆ. ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ಆರೋಪ ಮಾಡಲಾಗಿದ್ದು, ಹಲವು ಕ್ಷೇತ್ರಗಳಲ್ಲಿ ಇದೇ ರೀತಿ ಆಗಿದೆ ಎಂದು ಕಾಂಗ್ರೆಸ್ ಆರೋಪಿಸಿ ಪ್ರತಿಭಟನೆ ನಡೆಸುತ್ತಿದೆ.
ಮೌರ್ಯ ಸರ್ಕಲ್‌ನಿಂದ ಅರ್ಧ ಕಿ.ಮೀ ಪಾದಯಾತ್ರೆ, ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನಾ ಸಮಾವೇಶ ನಡೆಸಿ, ಬಳಿಕ ನಿಯೋಗದ ಮೂಲಕ ಚುನಾವಣಾ ಆಯೋಗಕ್ಕೆ ದೂರು ನೀಡಲು ಕಾಂಗ್ರೆಸ್ ತೀರ್ಮಾನಿಸಿದೆ. ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನಾ ಸಮಾವೇಶವನ್ನ ಅಧಿಕೃತವಾಗಿ ಘೋಷಣೆ ಮಾಡಿದರೆ, ಪಾದಯಾತ್ರೆಯನ್ನ ಗುಟ್ಟಾಗಿಯೇ ಉಳಿಸಿದ್ದಾರೆ.
ಸಭೆ ಬಳಿಕ ಮಾತನಾಡಿದ ಡಿಸಿಎಂ ಡಿಕೆಶಿ, ಮಹದೇವಪುರದಲ್ಲಿ ಅಕ್ರಮ ಆಗಿದೆ. ದಿನೇಶ್ ಗುಂಡೂರಾವ್ ಕ್ಷೇತ್ರ ಗಾಂಧಿನಗರದಲ್ಲಿ ಅಕ್ರಮ ಆಗಿದೆ. 7 ಸಾವಿರ ಮತ ಅಕ್ರಮ ಆಗಿವೆ. ಎಲ್ಲ ರಿಸರ್ಚ್ ಮಾಡಿದ್ದೇವೆ. ನಮ್ಮ ನಾಯಕರ ನೇತೃತ್ವದಲ್ಲಿ ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.