ಮತದಾರರಿಗೆ ಆಮಿಷ ಪ್ರಕರಣ: ಡಿಕೆ ಶಿವಕುಮಾರ್ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ತಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಆಮಿಷ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್(DK Shivakumar)​​ಗೆ ಕೊಂಚ ರಿಲೀಫ್ ದೊರೆತಿದ್ದು, ಡಿಕೆಶಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ (High Court)​ ಸೂಚನೆ ನೀಡಿದೆ.

ತಮ್ಮ ವಿರುದ್ಧ ಬೆಂಗಳೂರಿನ ಆರ್​ಎಂಸಿ ಯಾರ್ಡ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿರುವುದನ್ನು ಪ್ರಶ್ನಿಸಿ ಡಿಸಿಎಂ ಮಂಗಳವಾರ ಹೈಕೋರ್ಟ್ ಮೆಟ್ಟಿಲೇರಿದ್ದರು. ಅದರಂತೆ ಇಂದು(ಏ.25) ವಿಚಾರಣೆ ನಡೆಸಿತು. ವಿಚಾರಣೆ ನಡೆಸಿದ ಕೋರ್ಟ್‌ ಭಾಷಣದ ವೇಳೆ ಇದು ಪುನರಾವರ್ತನೆಯಾಗದಂತೆ ಕಕ್ಷಿದಾರರಿಗೆ ಎಚ್ಚರಿಸಿ ಎಂದು ಡಿಕೆಶಿ ಪರ ವಕೀಲ ಉದಯ್ ಹೊಳ್ಳಗೆ ಸೂಚಿಸಿ ಪ್ರಕರಣಕ್ಕೆ ತಡೆ ನೀಡಿತು.

‘ಚುನಾವಣೆ ಭಾಷಣವನ್ನು ಆಮಿಷವೆಂದು ಆರೋಪಿಸಲಾಗಿದೆ ಎಂದು ಡಿಕೆಶಿ ಪರ ಹಿರಿಯ ವಕೀಲ ಉದಯ್ ಹೊಳ್ಳ ಅವರು ವಾದ ಮಾಡಿದ್ದರು.

ಇನ್ನು ಡಿಕೆಶಿ ಪರ ವಾದಕ್ಕೆ ಚುನಾವಣಾ ಆಯೋಗದ ವಕೀಲರು ಆಕ್ಷೇಪ ವ್ಯಕ್ತಪಡಿಸಿ, ‘ಮತದಾರರಿಗೆ ಡಿಕೆ ಶಿವಕುಮಾರ್ ಆಮಿಷ ಒಡ್ಡಿದ್ದಾರೆ. ‘ನಾನು ಇಲ್ಲಿ ಬಿಸಿನೆಸ್ ಡೀಲ್​ಗೆ ಬಂದಿದ್ದೇನೆ, ‘ನಿಮಗೆ ಹೆಚ್ಚು ಕಾವೇರಿ ನೀರು ಜೊತೆಗೆ ನಿಮಗೆ ಅಪಾರ್ಟ್ ಮೆಂಟ್ ಪಕ್ಕದಲ್ಲಿ ಸಿಎ ಸೈಟ್ ಬೇಕೆಂದು ಕೇಳಿದ್ದೀರಿ. ನೀವು ನಮಗೆ ಮತ ಹಾಕಿದ 2 ರಿಂದ 3 ತಿಂಗಳಲ್ಲಿ ನಿಮಗೆ ಅದನ್ನು ಹಸ್ತಾಂತರಿಸುತ್ತೇನೆ ಎಂಬ ಡಿಕೆಶಿ ಹೇಳಿಕೆಯನ್ನ ಉಲ್ಲೇಖಿಸಿ ವಕೀಲ ಶರತ್ ದೊಡ್ಡವಾಡ್ ವಾದ ಮಂಡಿಸಿದ್ದರು.

ಎರಡು ಕಡೆಯ ವಾದ ಆಲಿಸಿ ಚುನಾವಣೆ ಪ್ರಚಾರದ ಗುಣಮಟ್ಟ ಕುಸಿತಕ್ಕೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿತು. ಭಾಷಣದ ವೇಳೆ ಇದು ಪುನರಾವರ್ತನೆಯಾಗದಂತೆ ಎಚ್ಚರಿಸಿ ಮುಂದಿನ ವಿಚಾರಣೆ ನಡೆಯುವರೆಗೂ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!