ಹೊಸದಿಗಂತ ಡಿಜಿಟಲ್ ಡೆಸ್ಕ್:
ವೋಟರ್ ಐಡಿ ಅಕ್ರಮಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆ ಕಚೇರಿಗಳ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ.
ಬೆಂಗಳೂರಿನ ವಿವಿಧೆಡೆ ಕಚೇರಿಗಳ ಮೇಲೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ.
ಮಹದೇವಪುರ, ರಾಜಾಜಿನಗರ, ಆರ್.ಆರ್. ನಗರದ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಚಿಲುಮೆ ಸಂಸ್ಥೆಯ ಸಂಸ್ಥಾಪಕ ರವಿಕುಮಾರ್ ಆಪ್ತ ಮಾರುತಿ ಮನೆಯ ಮೇಲೆಯೂ ದಾಳಿ ಮಾಡಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗಿದೆ.